ಕರ್ನಾಟಕ

karnataka

ETV Bharat / state

ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ: ಹೆಚ್​ಡಿಕೆ ಹೇಳಿದ್ದೇನು?

ರಾಜಕೀಯ ರಂಗದಲ್ಲಿ ಚರ್ಚೆಯಾಗುತ್ತಿರುವ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿ ಕೇಂದ್ರ ಸಂಪುಟ ನಿರ್ಣಯಕ್ಕೆ ಹೆಚ್.​ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

By ETV Bharat Karnataka Team

Published : Sep 19, 2023, 1:26 PM IST

ಹೆಚ್​ಡಿಕೆ
ಹೆಚ್​ಡಿಕೆ

ಬೆಂಗಳೂರು:ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ಹೆಚ್.ಡಿ.ದೇವೇಗೌಡರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12 ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಅಂಗೀಕಾರ ಆಗಲಿಲ್ಲ.

ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು. 27 ವರ್ಷಗಳ ನಂತರ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದಿದ್ದಾರೆ. 1995ರಲ್ಲಿ ಮಾನ್ಯ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು.

ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು. ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ ಎಂದು ಬಣ್ಣಿಸಿದ್ದಾರೆ.
ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಪ್ರಧಾನಿ ನರೇಂದ್ರ ಮೋದಿ ಅವರು, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎನ್ನುವುದು ನನ್ನ ಮನವಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:Women reservation: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ.. ಹೊಸ ಸಂಸತ್ತಿನಲ್ಲಿ ಮಂಗಳವಾರ ಮಂಡನೆ ಸಾಧ್ಯತೆ

ಜೈರಾಮ್ ರಮೇಶ್​ ಸ್ವಾಗತ:ಮಹಿಳಾ ಮೀಸಲಾತಿ ಮಸೂದೆಯನ್ನು ನಾವು ಸಂಪೂರ್ಣವಾಗಿ ಸ್ವಾಗತಿಸುತ್ತೇವೆ. ಮಸೂದೆಯ ವಿವರಗಳಿಗಾಗಿ ಕಾಯುತ್ತಿದ್ದೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಕಲಾಪದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ಕಾರ ಮಂಡಿಸಿದರೆ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗುತ್ತದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.

ಮಾ.9, 2010 ರಂದು ಅಂದಿನ ಯುಪಿಎ ಸರ್ಕಾರ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತ್ತು. ಆದರೆ ಲೋಕಸಭೆಯಲ್ಲಿ ಈ ವಿಷಯ ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿತ್ತು. ಅಧಿಕೃತ ಮೂಲಗಳ ಪ್ರಕಾರ, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಸ್ಥಾನವನ್ನು ಮೀಸಲಿಡುವ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ಮಹಿಳಾ ಮೀಸಲಾತಿ ಮಸೂದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಸ್ಥಾನಗಳನ್ನು ಮೀಸಲಿಡುತ್ತದೆ.

ಇದನ್ನೂ ಓದಿ:ಮಹಿಳಾ ಮೀಸಲಾತಿ ಮಸೂದೆ 'ಅಪ್ನಾ ಹೈ': ಸೋನಿಯಾ ಗಾಂಧಿ

ABOUT THE AUTHOR

...view details