ಕರ್ನಾಟಕ

karnataka

ETV Bharat / state

ದರ್ಪದ ಮಾತನಾಡಿರುವ ಸಚಿವ ಕತ್ತಿ ಸಂಪುಟದಿಂದ ಕೈಬಿಡಿ: ಹೆಚ್​​ಡಿಕೆ ಒತ್ತಾಯ - ಹೆಚ್ಡಿ ಕುಮಾರಸ್ವಾಮಿ

ಅಕ್ಕಿ ಕೇಳಿದ್ದ ರೈತನಿಗೆ ಸಾಯುವುದೇ ಒಳ್ಳೆಯದು ಎಂಬ ಉಡಾಫೆ ಉತ್ತರ ನೀಡಿದ್ದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಉಮೇಶ್ ಕತ್ತಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಅವರನ್ನ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿದ್ದಾರೆ.

ಸಚಿವ ಉಮೇಶ್ ಕತ್ತಿ

By

Published : Apr 28, 2021, 5:10 PM IST

ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ವಿಕೃತಿ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ. ಇದನ್ನು ತೀವ್ರವಾಗಿ ಖಂಡಿಸುವೆ ಎಂದಿದ್ದಾರೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಅವರು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಅಕ್ಕಿ ಇಲ್ಲದೇ ಉಪವಾಸ ಸಾಯ್ಬೇಕಾ ಎಂದ ರೈತನಿಗೆ ಸತ್ತರೆ ಒಳ್ಳೆಯದೇ ಎಂದ ಸಚಿವ ಕತ್ತಿ.. ಆಡಿಯೋ ವೈರಲ್​​

ABOUT THE AUTHOR

...view details