ಬೆಂಗಳೂರು:ಗೋವಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಮುದ್ದೇಬಿಹಾಳ ಮೂಲದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಗೋವಾದಲ್ಲಿ ಕನ್ನಡಿಗರ ಬದುಕು ಸಂಕಷ್ಟದಲ್ಲಿರುವುದಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಕರಣವೊಂದರಲ್ಲಿ ಕನ್ನಡಿಗ ಕುಟುಂಬಕ್ಕೆ ಗೋವಾದ ಪೊಲೀಸರು ಕಿರುಕುಳ ನೀಡಿದ್ದರು ಎಂಬುದು ಅವರ ಡೆತ್ನೋಟ್ನಲ್ಲೇ ಇದೆ ಎನ್ನಲಾಗಿದೆ. ಕಳ್ಳತನದಂಥ ಬಂಡ ಬಾಳು ಬದುಕಿದ್ದಿದ್ದರೆ ಆ ಕುಟುಂಬ ಆತ್ಮಹತ್ಯೆಯಂಥ ನಿರ್ಧಾರಕ್ಕೆ ಬರುತ್ತಿರಲಿಲ್ಲ. ಕನ್ನಡಿಗರೆಂಬ ಕಾರಣಕ್ಕೆ ಈ ಕುಟುಂಬದ ಮೇಲೆ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.