ಕರ್ನಾಟಕ

karnataka

ETV Bharat / state

ಜೆಡಿಎಸ್ ಅಡ್ರೆಸ್​ಗೆ ಇಲ್ಲ ಎಂಬ ಸಿಎಂ ಹೇಳಿಕೆಗೆ ಹೆಚ್​ಡಿಕೆ ಕೊಟ್ಟ ತಿರುಗೇಟು ಏನು? - ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಹೆಚ್​ಡಿಕೆ

ಸಿಎಂ ಯಡಿಯೂರಪ್ಪನವರು ಜೆಡಿಎಸ್​ ಪಕ್ಷ ಕುರಿತು ಜೆಡಿಎಸ್ ಪಕ್ಷ ಈಗ ಅಡ್ರೆಸ್​ಗೆ ಇಲ್ಲದಂತಾಗಿದೆ ಎಂದು ಹೆಳೀಕೆ ನೀಡಿದ್ದು, ಇದಕ್ಕೆ ಕುಮಾರಸ್ವಾಮಿ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ
Kumaraswamy

By

Published : Dec 22, 2019, 7:15 PM IST

ಬೆಂಗಳೂರು : ಜೆಡಿಎಸ್ ಪಕ್ಷ ಈಗ ಅಡ್ರೆಸ್​ಗೆ ಇಲ್ಲದಂತಾಗಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿರುವ ಹೆಚ್​ಡಿಕೆ, ನನ್ನ ಅಡ್ರೆಸ್‌ ಬಗ್ಗೆ ನೀವು ಮಾತನಾಡಿದ್ದೀರಿ ಬಿಎಸ್ವೈ. ನನ್ನ ಅಡ್ರೆಸ್‌ ತೋರಿಸುವುದು ಈ ನೆಲ, ಈ ಜನ. ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ ಅಡ್ರೆಸ್‌ ತೋರಿಸುತ್ತಾರೆ. ಅಷ್ಟಕ್ಕೂ 2006ರಲ್ಲಿ ಒಂದು ಸಚಿವ ಸ್ಥಾನಕ್ಕಾಗಿ ನನ್ನ ‘ಅಡ್ರೆಸ್‌‘ ಹುಡುಕಿಕೊಂಡು ಬಂದವರು ನೀವೇ ಅಲ್ಲವೇ? ನೆನಪಿಲ್ಲದಿದ್ದರೆ ಒಂದು ಬಾರಿ ನೆನಪಿಸಿಕೊಳ್ಳಿ ಎಂದು ಟಾಂಗ್ ನೀಡಿದ್ದಾರೆ.

ಮೂರೂವರೆ ವರ್ಷ ನಾನೇ ಸಿಎಂ, ಕುಮಾರಸ್ವಾಮಿ ಅಡ್ರೆಸ್‌ಗೆ ಇಲ್ಲದಂತಾಗಿದ್ದಾರೆ ಎಂದಿದ್ದಾರೆ ಬಿಎಸ್ವೈ. ಶತಮಾನಗಳ ಕಾಲ ಭಾರತವನ್ನು ದಾಸ್ಯದಲ್ಲಿಟ್ಟುಕೊಂಡ ಬ್ರಿಟಿಷರ ಅಂಕುಶವಿಲ್ಲದಂತಿದ್ದ ಸಾಮ್ರಾಜ್ಯವನ್ನೇ ಈ ನೆಲದ ಜನ ಕೊನೆಗಾಣಿಸಿದ್ದಾರೆ. ಇನ್ನು ನಿಮ್ಮ ಮೂರು ವರ್ಷ ಯಾವ ಲೆಕ್ಕ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರದ ಅಮಲು ನಿಮ್ಮ ಮೂಲಕ ಏನೇನನ್ನೋ ಹೇಳಿಸುತ್ತಿದೆ. ಅಂಕುಶವಿಲ್ಲದಂತಿದ್ದ ಬಿಳಿಯರ ಸಾಮ್ರಾಜ್ಯವನ್ನೇ ಈ ಜನ ಅಂತ್ಯಗೊಳಿಸಿದ್ದಾರೆ. ಸಣ್ಣ ಪ್ರಾಂತ್ಯವನ್ನು ಮುನ್ನಡೆಸಿದರೂ ಉತ್ತಮ ಆಡಳಿತ ನೀಡಿದ ಕೆಂಪೇಗೌಡರ ಪ್ರಾಂತ್ಯವೂ ಇದೇ ನೆಲದಲ್ಲೇ ಅಳಿದಿದೆ. ಆದರೆ ಇಲ್ಲಿ ಉಳಿದಿದ್ದು ಹೆಸರು. ನಿಮ್ಮ–ನಮ್ಮ ವಿಚಾರದಲ್ಲೂ ಇದು ಅನ್ವಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರದ ಮದದಲ್ಲಿ ಆಣೆಗಳನ್ನಿಟ್ಟವರನ್ನೇ ನಮ್ಮ ಜನ ಬಿಟ್ಟಿಲ್ಲ. ಅವರಿಗೆ ನನ್ನ ಅಡ್ರೆಸ್‌ ತೋರಿಸಿದ್ದಾರೆ. ಇನ್ನು ನೀವು ಅಡ್ರೆಸ್‌ ಕೇಳಿದಾಗ್ಯೂ ಜನ ನನ್ನ ಅಡ್ರೆಸ್‌ ತೋರಿಸದೇ ಬಿಟ್ಟಾರೆಯೇ? ಎಚ್ಚರದಿಂದಿರಿ ಎಂದು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details