ಕರ್ನಾಟಕ

karnataka

ETV Bharat / state

'ಸುಳ್ಳಿನ ಸಿದ್ದಪುರುಷ'ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ?: ಹೆಚ್​​ಡಿಕೆ ಕಿಡಿ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ವಾಗ್ದಾಳಿ

ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂತಹ ರಾಜಕಾರಣ?. ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂತಹ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

HD kumaraswamy and siddaramaiah
ಹೆಚ್​.ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ

By

Published : Jan 23, 2022, 11:08 AM IST

Updated : Jan 23, 2022, 11:26 AM IST

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ವಾಕ್ಸಮರ ಮುಂದುವರೆದಿದೆ. ಸಿದ್ದರಾಮಯ್ಯಗೆ ಮತ್ತೆ ತಿರುಗೇಟು ನೀಡಿರುವ ಹೆಚ್​​ಡಿಕೆ ಸುಳ್ಳಿನ 'ಸಿದ್ದಪುರುಷ'ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ? ಎಂದು ಕಿಡಿ ಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂತಹ ರಾಜಕಾರಣ?. ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂತಹ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ.

ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ?. ಆ ಯೋಗ್ಯತೆ ಅವರಿಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು?. ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ? ಎಂದಿದ್ದಾರೆ.

ಇದು ಭ್ರಮೆಯ ಪರಮಾವಧಿ: ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ. ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ. ಜತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳ? ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ. ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ ಎಂದು ತಿರುಗೇಟು ನೀಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ:ತುಮಕೂರು ಜಿಲ್ಲೆಯಿಂದ ಜೆಡಿಎಸ್​ ಅನ್ನು ಓಡಿಸಿ, ಬಿಜೆಪಿಯ ಬಾಲಂಗೋಚಿ ಇಂತಹ ನುಡಿಮುತ್ತುಗಳು 'ಸ್ವಯಂ ಘೋಷಿತ ಸಂವಿಧಾನ ಪಂಡಿತ'ನ ರಾಜಕೀಯ ಫಜೀತಿಯ ಪರಾಕಾಷ್ಠೆ. ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ನಿಜ ಚುನಾವಣೆಯಲ್ಲಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ. ನಾನೂ ಸೋತಿದ್ದೇನೆ. ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ. ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ.

ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ. ಇನ್ನು ಕಮಿಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ 'ಅರ್ಕಾವತಿ' ಆರ್ತನಾದಕ್ಕೆ ಕಾರಣರು ಯಾರು?. ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ? ದೇವರಾಜ ಅರಸು ಅವರ ನಂತರ '5 ವರ್ಷದ ಮುಖ್ಯಮಂತ್ರಿ' ಎಂದು ಹೇಳಿಕೊಳ್ಳುವ ಅಪರ ಸಿದ್ದಪುರುಷರ ಪಾಡೇನು? 5 ವರ್ಷದ ಮುಖ್ಯಮಂತ್ರಿ ಎಂಬ ಪ್ರಭಾವಳಿಯ ಕಥೆ ಏನು? ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ನಾನು ಸೋತಿದ್ದೇನೆ, ಅವರಪ್ಪ ಸೋತಿಲ್ವಾ, ಮಗ ಸೋತಿಲ್ವಾ, ಅಣ್ಣ ಸೋತಿಲ್ವಾ?: ಹೆಚ್​ಡಿಕೆಗೆ ಸಿದ್ದರಾಮಯ್ಯ ತಿರುಗೇಟು

Last Updated : Jan 23, 2022, 11:26 AM IST

For All Latest Updates

TAGGED:

ABOUT THE AUTHOR

...view details