ಬೆಂಗಳೂರು: ಕ್ಯಾಬ್ ದರ ಸಮರ ಮತ್ತು ಸರ್ಕಾರದ ನಿರ್ಲಕ್ಷ್ಯದಿಂದ ಪ್ರತಾಪ್ ಬಲಿಯಾಗಿದ್ದಾನೆ.ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂ. ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್‌ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್‌ಟಿಡಿಸಿ ಕ್ಯಾಬ್ ಚಾಲಕ ಪ್ರತಾಪ್ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದು ಕೊಂಡಿವೆ ಎಂದು ಹೇಳಿದ್ದಾರೆ.