ಬೆಂಗಳೂರು: ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೋವಿಡ್ ಲಾಕ್ಡೌನ್ ವೇಳೆಯಲ್ಲಿ ಹಲವಾರು ಲೇಖಕರು ಬರೆದ ಮಹತ್ವದ ಪುಸ್ತಕಗಳನ್ನು ಓದಿದೆ. ಇತಿಹಾಸದ ಕೆಲ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಿದೆ. ಆ ಪುಸ್ತಕಗಳಲ್ಲಿ ಬರೆಯಲಾಗಿರುವ ಕೆಲ ಅಂಶಗಳನ್ನಷ್ಟೆ ನಾನು ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಯಾವುದೇ ಸಂಘ, ಸಂಸ್ಥೆಯ ಬಗ್ಗೆ ಲಘುವಾಗಿ ಮಾತನಾಡಿಲ್ಲ: RSS ಹೇಳಿಕೆ ಬಗ್ಗೆ ಹೆಚ್ಡಿಕೆ ಸ್ಪಷ್ಟನೆ - ಆರ್ಎಸ್ಎಸ್ ಕುರಿತು ಲಘುವಾಗಿ ಮಾತನಾಡಿದ ಹೆಚ್ಡಿಕೆ
ಇತಿಹಾಸದ ಕೆಲ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಿದೆ. ಆ ಪುಸ್ತಕಗಳಲ್ಲಿ ಬರೆಯಲಾಗಿರುವ ಕೆಲ ಅಂಶಗಳನ್ನಷ್ಟೆ ನಾನು ಹೇಳಿದ್ದೇನೆ. ಅದು ಬಿಟ್ಟು ಯಾವುದೇ ಸಂಘ ಸಂಸ್ಥೆಗಳಿಗೆ ಕುರಿತು ಲಘುವಾಗಿ ಮಾತನಾಡಿಲ್ಲ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಸ್ತುತ ದೇಶ ಹೋಗುತ್ತಿರುವ ಹಾದಿ ನೋಡಿದರೆ ಜನರ ಮುಂದೆ ಸತ್ಯ ಇಡುವುದು ಅತ್ಯಂತ ಅಗತ್ಯ ಎಂದು ನನಗೆ ಅನಿಸಿತು. ವಾಸ್ತವವಾಗಿ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿಲ್ಲ. ಸತ್ಯ ಮುಚ್ಚಿಟ್ಟರೆ ತಮ್ಮ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರಿಗೆ ಅಪಚಾರ ಮಾಡಿದಂತೆ ಆಗುತ್ತದೆ.
ಯಾವತ್ತಿದ್ದರೂ ಜನರಿಗೆ ಸತ್ಯ ಗೊತ್ತಾಗಲೇಬೇಕು. ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ. ನನ್ನ ಹೇಳಿಕೆ ಯಾರ ಪರವೂ ಇಲ್ಲ ಅಥವಾ ವಿರೋಧವೂ ಇಲ್ಲ. ಸತ್ಯ ಚರ್ಚೆ ಆಗಬೇಕು ಎಂಬುದು ನನ್ನ ಅಭಿಲಾಷೆ. ನಾನು ಸತ್ಯದ ಪರ ಎಂದು ಹೆಚ್ಡಿಕೆ ಹೇಳಿದ್ದಾರೆ.