ಬೆಂಗಳೂರು:ಮೇಕೆದಾಟು ನದಿನೀರು ಯೋಜನೆಯ ವಿಷಯದಲ್ಲಿ ತಮಿಳುನಾಡಿನ ಒಪ್ಪಿಗೆ ಇಲ್ಲದೆಯೂ ರಾಜ್ಯ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಲು ಮುಂದಾಗಬೇಕು ಎಂದು ಶಾಸಕ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
ಕಾಂಗ್ರೆಸ್ ವಿರುದ್ಧಪರೋಕ್ಷವಾಗಿ ವಾಗ್ದಾಳಿ ನಡೆಸಿದ ಹೆಚ್‌ಡಿಕೆ ವಿಧಾನಸಭೆಯಲ್ಲಿಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯನ್ನು ಅನುಷ್ಠಾನ ಮಾಡಲು ತಮಿಳುನಾಡು ಇಲ್ಲವೇ ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿಲ್ಲ. ಪರಿಸರ ಇಲಾಖೆಯಿಂದ ಒಪ್ಪಿಗೆ ಪಡೆದು ಯೋಜನೆ ಅನುಷ್ಠಾನ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೆಚ್ಚಿನ ಶ್ರಮವಹಿಸಿದರೆ ಇದು ಸಾಧ್ಯ ಎಂದು ಹೇಳಿದರು.
ಕಾಂಗ್ರೆಸ್ಗೆ ಟಾಂಗ್:ಪಾದಯಾತ್ರೆ ಮಾಡುವುದರಿಂದ ಯೋಜನೆ ಅನುಷ್ಠಾನ ಸಾಧ್ಯವಿಲ್ಲ. ಹೇಗಿದ್ದರೂ ಸರ್ಕಾರ ಇದಕ್ಕೆ ಬಜೆಟ್‍ನಲ್ಲಿ ಒಂದು ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದೆ. ಇದಕ್ಕೆ ಕೆಲವರು ನಮ್ಮಿಂದ ಹೆದರಿ ಅನುದಾನ ಬಿಡುಗಡೆ ಮಾಡುತ್ತಿದ್ದಾರೆ ಎಂದು ಬೀಗುತ್ತಿದ್ದಾರೆ ಎಂದು ಕಾಂಗ್ರೆಸ್ನವರಿಗೆ ಪರೋಕ್ಷ ತಿರುಗೇಟು ನೀಡಿದರು.
ಕಾಂಗ್ರೆಸ್ ವಿರುದ್ಧಪರೋಕ್ಷವಾಗಿ ವಾಗ್ದಾಳಿ ನಡೆಸಿದ ಹೆಚ್‌ಡಿಕೆ ನಮ್ಮ ನೀರು ನಮ್ಮ ಹಕ್ಕು ಎಂದು ಈಗ ಕೆಲವರು ಪಾದಯಾತ್ರೆ ಮಾಡಿದ್ದಾರೆ. ಮಹದಾಯಿ ಯೋಜನೆಯನ್ನು ಅನುಷ್ಠಾನ ಮಾಡಬೇಕೆಂದು ಗದಗ ಮತ್ತು ನರಗುಂದಲ್ಲಿ ರೈತರು ಧರಣಿ ನಡೆಸುತ್ತಿದ್ದರು. ಆಗ ರೈತರು, ಮಹಿಳೆಯರು, ಮಕ್ಕಳೆನ್ನದೆ ಮನೆ ಮನೆಗೆ ನುಗ್ಗಿ ಪೊಲೀಸರ ಲಾಠಿಯಿಂದ ಹೊಡಿಸಿದ್ದೀರಿ. ಆವಾಗ ನಿಮಗೆ ಬದ್ದತೆ ಇರಲಿಲ್ಲವೇ? ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವ್ಯಂಗ್ಯ:ರಾಜ್ಯದಲ್ಲಿ ಎಲ್ಲಾ ನೀರಾವರಿ ಯೋಜನೆಗಳನ್ನು ನಾವೇ ಅನುಷ್ಠಾನ ಮಾಡುತ್ತಿದ್ದೇವೆ. ಅಣೆಕಟ್ಟುಗಳನ್ನು ನಾವೇ ಕಟ್ಟಿಸಿದ್ದೇವೆ ಎಂದು ಕೆಲವರು ಮಾತನಾಡುತ್ತಾರೆ. ಅಧಿಕಾರದಲ್ಲಿದ್ದಾಗ ಏನೂ ಮಾಡದ ಕೆಲವರು ಈಗ ಪಾದಯಾತ್ರೆ ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಮತ್ತೆ ಮೇಕೆದಾಟು ವಿಚಾರ ಪ್ರಸ್ತಾಪ ಮಾಡಿದ ಹೆಚ್‌ಡಿಕೆ, ಡಿಪಿಆರ್ನಲ್ಲಿ ಮಾಡಿರುವ ಲೋಪದ ಬಗ್ಗೆ ಪ್ರಸ್ತಾಪಿಸಿದರು. ಡಿಪಿಆರ್ನಲ್ಲಿ ಹೆಚ್ಚುವರಿ ನೀರು ಬಳಸಿಕೊಳ್ಳುವ ಬಗ್ಗೆ ಹೇಳಿದ್ದಾರೆ. ಹಾಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ತಮಿಳುನಾಡು ಜೊತೆ ಕರ್ನಾಟಕ ಮಾತನಾಡಬೇಕೆಂದು ಮೊನ್ನೆ ಕೇಂದ್ರ ಸಚಿವರು ಹೇಳಿ ಹೋಗಿದ್ದಾರೆ. ಹಾಗೆ ಹೇಳುವ ಅವಶ್ಯಕತೆ ಏನಿತ್ತು? ಎಂದರು.
ಇದನ್ನೂ ಓದಿ: ಬಿಜೆಪಿ ಬಿ ಟೀಮ್ ವಿಚಾರ : ವಿಧಾನಸಭೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರ