ಕರ್ನಾಟಕ

karnataka

ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು: ಹೆಚ್​ಡಿಕೆ ಒತ್ತಾಯ

By

Published : May 15, 2020, 9:37 PM IST

ರಾಜ್ಯ ಸರ್ಕಾರದ ನಡೆಯನ್ನು ಟ್ವೀಟ್​ ಮೂಲಕ ಖಂಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಲಾಕ್​ಡೌನ್ ವೇಳೆ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಕಾರಣ ಎಂದು ಆಪಾದಿಸಿದ್ದಾರೆ.

HD Kumaraswamy tweet about consolation centers
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು ಹೊರಟಿರುವುದು ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್​

ಈ ಕುರಿತು ಟ್ವೀಟ್ ಮಾಡಿದ ಅವರು, ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್​

ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುವ ಕೆಲಸದಲ್ಲಿ ಮಗ್ನವಾಗಿದ್ದವು. ಲಾಕ್​ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಒತ್ತಾಯಿಸಿದ್ದಾರೆ.

ABOUT THE AUTHOR

...view details