ಬೆಂಗಳೂರು : ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕೆರೆ ಕಾಮೇಗೌಡರಿಗೆ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕು: ಹೆಚ್ಡಿಕೆ ಒತ್ತಾಯ - Kere kamegowdha health problem
ಅನಾರೋಗ್ಯದಿಂದ ಬಳಲುತ್ತಿರುವ ಕೆರೆ ಕಾಮೇಗೌಡರನ್ನು ಒಳ್ಳೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
![ಕೆರೆ ಕಾಮೇಗೌಡರಿಗೆ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕು: ಹೆಚ್ಡಿಕೆ ಒತ್ತಾಯ H d Kumaraswamy](https://etvbharatimages.akamaized.net/etvbharat/prod-images/768-512-12:58:13:1595662093-kn-bng-02-ex-cm-hdk-tweet-script-7208083-25072020124732-2507f-1595661452-623.jpg)
H d Kumaraswamy
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ತುರ್ತಾಗಿ ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕಾಮೇಗೌಡರನ್ನು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು, ಅನಾರೋಗ್ಯದಿಂದ ಇರುವ ಅವರನ್ನು ಒಳ್ಳೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.