ಕರ್ನಾಟಕ

karnataka

ETV Bharat / state

ಪುತ್ರನ ಸ್ನೇಹಿತನನ್ನು ದಾಳವಾಗಿಸಿ ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ; ಹೆಚ್​ಡಿಕೆ ಟಾಂಗ್ - By-Election 2020

ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿ(ಎಸ್) ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ? 'ದೋಸ್ತಿ ದಾಳ'ವನ್ನು ರಾಜಕೀಯವಾಗಿ ಬಳಸಿಕೊಂಡು ತಾವು ಬೆಳೆದ ಪಕ್ಷಗಳಿಗೆ ಕುತ್ತು ತರುವ ಚಾಳಿ ಅವರಿಗೆ ಹೊಸತೇನಲ್ಲ..

HD Kumaraswamy tweet about Siddaramaiah statement
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

By

Published : Oct 6, 2020, 8:31 PM IST

ಬೆಂಗಳೂರು :ವೈಯಕ್ತಿಕ ನೆಲೆಯಲ್ಲಿ ಸ್ನೇಹ ವಿಶ್ವಾಸವೇ ಬೇರೆ. ಆದರೆ, ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿ ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​

ಈ ಕುರಿತು ಟ್ವೀಟ್ ಮಾಡಿರುವ ಅವರು, ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿ(ಎಸ್) ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ? 'ದೋಸ್ತಿ ದಾಳ'ವನ್ನು ರಾಜಕೀಯವಾಗಿ ಬಳಸಿಕೊಂಡು ತಾವು ಬೆಳೆದ ಪಕ್ಷಗಳಿಗೆ ಕುತ್ತು ತರುವ ಚಾಳಿ ಅವರಿಗೆ ಹೊಸತೇನಲ್ಲ ಎಂದು ಕಿಡಿಕಾರಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​

ನನಗೂ ಪಕ್ಷಾತೀತವಾಗಿ ಹಿರಿಯ, ಕಿರಿಯ ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಆದರೆ, ಸಿದ್ದರಾಮಯ್ಯನವರಿಗೆ ಇದೊಂದು ಅಂಟುಜಾಡ್ಯ ಎಂಬುದನ್ನು ಸಾಬೀತು ಪಡಿಸುತ್ತಲೇ ಬಂದಿದ್ದಾರೆ. ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಗೆಳೆಯನನ್ನು ಬಿಜೆಪಿಗೆ ಕಳುಹಿಸಿರುವ ಮರ್ಮವನ್ನು ಕಾಂಗ್ರೆಸ್ಸಿಗರೂ ಬಲ್ಲರು! ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

'ಎನ್ನ ಮನವೆಂಬ ಮರ್ಕಟನು

ತನುವಿಕಾರವೆಂಬ ಅಲ್ಪಸುಖದಾಸೆಗಾಡಿ,

ವೃಥಾ ಭ್ರಮೆಗೊಂಡು, ನಾನಾ ದೆಸೆಗೆ ಲಂಘಿಸಿ

ಅಳಲಿಸಿ ಬಳಲಿಸುತ್ತಿದೆ ನೋಡಾ!

ಕೂಡಲಸಂಗಮೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ,

ಅಪರಿಮಿತದ ಸುಖವನೈದದು, ನೋಡಾ' ... ಎಂದು ವಚನದ ಮೂಲಕ ತಿರುಗೇಟು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ABOUT THE AUTHOR

...view details