ಕರ್ನಾಟಕ

karnataka

ETV Bharat / state

'ಬಿಜೆಪಿ ಬಿ ಟೀಂನ ಕ್ಯಾಪ್ಟನ್, ಆಪರೇಷನ್ ಕಮಲಯ್ಶ, ಸಿದ್ಧ ಸೂತ್ರಧಾರ': ಸಿದ್ದು ವಿರುದ್ಧ ಹೆಚ್​​ಡಿಕೆ ವಾಗ್ದಾಳಿ - ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಟ್ವೀಟ್​

ಬಿಜೆಪಿ ಬಾಲಂಗೋಚಿ, ಬಿಜೆಪಿ ಬಿ ಟೀಂನ ಕ್ಯಾಪ್ಟನ್, ಆಪರೇಷನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಷನ್ ಕಮಲದ ಆಸಾಮಿ ಅಲ್ಲವೇ? ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.

hd-kumaraswamy-tweet-against-siddaramaiah
ಸಿದ್ದು ವಿರುದ್ಧ ಹೆಚ್​​ಡಿಕೆ ವಾಗ್ದಾಳಿ

By

Published : Jun 1, 2022, 9:56 AM IST

ಬೆಂಗಳೂರು: ಬಿಜೆಪಿ ಸರ್ಕಾರದ ಕಾರಣ ಪುರುಷ, ಅಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ.

ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಹೆಚ್​ಡಿಕೆ ಈ ಕುರಿತು ಟ್ವೀಟ್ ಮಾಡಿ, ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ. 'ಭಾಷಣ ಒಂದು, ರಾಜಕಾರಣ ಇನ್ನೊಂದು!!', ಇದಯ್ಯ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ? ಎಂದು ಪ್ರಶ್ನಿಸಿದ್ದಾರೆ.

ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದೀರಿ. ಏನಿದರ ಹಕೀಕತ್ತು?. ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿರುವ ನಿಮ್ಮ 'ಮುಸ್ಲಿಂ ಮೂಲೋತ್ಪಾಟನಾ ರಾಜಕೀಯ'ಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಇದೆಂಥಾ ರಾಜಕೀಯವಯ್ಯಾ? ಎಂದು ಕಿಚಾಯಿಸಿದ್ದಾರೆ.

ರಾಮನ ಹೆಸರು, ರಾವಣ ರಾಜಕೀಯ!! ನಿಮಗೆ ನೀವೇ ಸಾಟಿ. ಜಾತ್ಯತೀತತೆಯ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ, ಜಾತಿಗೊಂದು ಸಮಾವೇಶ ನಡೆಸಿಕೊಂಡು ಅಲ್ಪಸಂಖ್ಯಾತ ವ್ಯಕ್ತಿಯನ್ನು 2ನೇ ಅಭ್ಯರ್ಥಿ ಮಾಡಿದ ಒಳಗುಟ್ಟು ಏನು?. ಆಪರೇಷನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ? ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ಅಲ್ಪಸಂಖ್ಯಾತರ ಬಗ್ಗೆ ಅಷ್ಟು ಮಮಕಾರ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮಾಡಲಿಲ್ಲ ಯಾಕೆ? ನಿಮಗೆ ಜೈರಾಮ್​ ರಮೇಶ್ ಹೆಚ್ಚೋ ಅಥವಾ ಮನ್ಸೂರ್ ಖಾನ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ?? ಎಂದು ಪ್ರಶ್ನಿಸಿದ್ದಾರೆ.

ಇಕ್ಬಾಲ್ ಅಹಮದ್ ಸರಡಗಿ ಆಯಿತು. ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಆಯಿತು. ರೋಷನ್ ಬೇಗ್ ಕಥೆಯನ್ನು ಮುಗಿಸಿದಿರಿ. ತನ್ವೀರ್ ಸೇಠ್ ನಿಮ್ಮ ಹಿಟ್ ಲಿಸ್ಟಿನಲ್ಲಿ ಇದ್ದಾರೆ. ಸತ್ಯ ಹೇಳಿದ ಸಲೀಂರನ್ನು ಸಲೀಸಾಗಿ ಸೈಡಿಗಟ್ಟಿದಿರಿ. ಒಂದೇ ಕಲ್ಲಿನಲ್ಲಿ ಅನೇಕ ಹಕ್ಕಿಗಳನ್ನು ಹೊಡೆಯೋದು ಅಂದರೆ ಇದೇನಾ? ಎಂದು ಟಾಂಗ್ ನೀಡಿದ್ದಾರೆ.

ಬಿಜೆಪಿ ಬಾಲಂಗೋಚಿ, ಬಿಜೆಪಿ ಬಿ ಟೀಂನ ಕ್ಯಾಪ್ಟನ್, ಆಪರೇಷನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ? ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:‘ನನಗೆ ಶಕ್ತಿ ಮತ್ತು ಉತ್ಸಾಹದ ಕೊರತೆಯಿದೆ’.. ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಬ್ರಿಜೇಶ್ ಕಾಳಪ್ಪ!

For All Latest Updates

TAGGED:

ABOUT THE AUTHOR

...view details