ಕರ್ನಾಟಕ

karnataka

ETV Bharat / state

ನೀವು ಭಾರತದ ಪ್ರಧಾನಿಯೋ ಅಥವಾ ಪಾಕ್‌ನ ಪ್ರಧಾನಿಯೋ.. ಹೆಚ್​ಡಿಕೆ ಟ್ವೀಟಾಸ್ತ್ರ - HDK Latest Tweet

ಪ್ರಧಾನಿ ಮೋದಿಯವರನ್ನು ಸರಣಿ ಟ್ವೀಟ್​ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

hd-kumaraswamy-tweet
ಹೆಚ್​ಡಿಕೆ ಆಕ್ರೋಶ

By

Published : Jan 3, 2020, 1:43 PM IST

ಬೆಂಗಳೂರು: ಸಿಎಎ ವಿಷಯದಲ್ಲಿ ಪದೇಪದೆ ಪಾಕ್‌ನ ಜಪ ಮಾಡುವ ಮೋದಿ ಅವರೇ, ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟಿದ್ದಾರೋ?, ಭಾರತದ ಪ್ರಜೆಗಳು ವೋಟು ಕೊಟ್ಟಿದ್ದಾರೋ?, ಭಾರತದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ? ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮ್ಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ? ಎಂದು ಪ್ರಶ್ನಿಸಿದ್ದಾರೆ.

ಇಪ್ಪತ್ತೈದು ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ರೂ. ನಷ್ಟವಾದರೂ ಕೊಟ್ಟಿದ್ದು ಬಿಡಿಗಾಸು. ನೆರೆ ಬಾಕಿ ಇನ್ನೂ ಕೊಟ್ಟಿಲ್ಲ. ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ, ಬರ ಪರಿಹಾರವಿಲ್ಲ, ಇವುಗಳ ಬಗ್ಗೆ ಮಾತನಾಡಲಾಗದ ನೀವು, ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ಅವರುಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿದ್ದೀರಾ?, ಇಲ್ಲ. ಅದು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನ ಸಾಬೀತು ಮಾಡುತ್ತದೆ ಎಂದು ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ABOUT THE AUTHOR

...view details