ಕರ್ನಾಟಕ

karnataka

ETV Bharat / state

ಲಾಲ್ ಬಹಾದ್ದೂರ್ ಶಾಸ್ತ್ರಿ, ಮಹಾತ್ಮ ಗಾಂಧಿ ಜಯಂತಿಗೆ ಶುಭ ಕೋರಿದ ಕುಮಾರಸ್ವಾಮಿ - ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮ ದಿನ

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.

ಕುಮಾರಸ್ವಾಮಿ
ಕುಮಾರಸ್ವಾಮಿ

By

Published : Oct 2, 2020, 9:36 AM IST

ಬೆಂಗಳೂರು: ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಹೊಳಪು ನೀಡಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸರಳ ವ್ಯಕ್ತಿತ್ವ, ದೃಢ ನಿರ್ಧಾರದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್​ಡಿಕೆ, ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ಈ ಮಹಾ ಪುರುಷರ ಬದುಕಿನ ತತ್ವ, ಆದರ್ಶಗಳು ಹಾಗೂ ಮಾದರಿ ಬದುಕು ಸರ್ವಕಾಲಕ್ಕೂ ಅನುಕರಣೀಯ ಎಂದು ಸ್ಮರಿಸಿದ್ದಾರೆ.

ಕುಮಾರಸ್ವಾಮಿ ಟ್ವೀಟ್

ಈ ಮಹಾಚೇತನಗಳ ಸಾಮಾಜಿಕ ಬದ್ಧತೆ, ಜೀವನ ಮತ್ತು ಮಾದರಿ ವ್ಯಕ್ತಿತ್ವ ನಮ್ಮೆಲ್ಲರಿಗೂ ಸ್ಫೂರ್ತಿಯ ಸೆಲೆ. ಅವರ ಸತ್ಯದ ಹಾದಿ ಮತ್ತು ಪ್ರಾಮಾಣಿಕತೆ ನಮ್ಮೆಲ್ಲರಿಗೂ ದೀವಿಗೆ ಎಂದು ಹೇಳಿದ್ದಾರೆ.

ABOUT THE AUTHOR

...view details