ಕರ್ನಾಟಕ

karnataka

ETV Bharat / state

ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ: ಹೆಚ್​ಡಿಕೆ ಖಂಡನೆ - ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ

ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ.

ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ : ಹೆಚ್​ಡಿಕೆ ಖಂಡನೆ
hd-kumarswamy-condemn-student-attacked-for-waving-kannada-flag-incident

By

Published : Dec 1, 2022, 2:40 PM IST

ಬೆಂಗಳೂರು : ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ.

ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ಬಾಲಕನ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ. ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು.

ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು. ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ‌ಪ್ರದರ್ಶಿಸಿದ ವಿದ್ಯಾರ್ಥಿ ಮೇಲೆ‌ ದೌರ್ಜನ್ಯ ಆರೋಪ: ರಸ್ತೆ ತಡೆದು ಕರವೇ ಪ್ರತಿಭಟನೆ

For All Latest Updates

ABOUT THE AUTHOR

...view details