ಕರ್ನಾಟಕ

karnataka

ETV Bharat / state

ನೀವು ಉಂಡ ಮನೆಗೆ ದ್ರೋಹ ಬಗೆದವರು: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ಕಿಡಿ - HDK tweet about siddaramaiah

ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಿಮ್ಮನ್ನು ಡಿಸಿಎಂ ಮಾಡಿದ ಜೆಡಿಎಸ್, ರಾಜಕೀಯ ಪಕ್ಷವೇ ಅಲ್ಲ ಅಂತೀರಲ್ಲ. ಹೋಗಲಿ ನಿಮ್ಮನ್ನ ಸಿಎಂ ಮಾಡಿದ ಕಾಂಗ್ರೆಸ್ ಮೇಲಾದ್ರು ನಿಯತ್ತಿದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.

HD kumarswamy outrage against siddaramaiah in twitter
ಹೆಚ್​ಡಿಕೆ ವಾಗ್ದಾಳಿ

By

Published : Oct 5, 2020, 11:05 AM IST

ಬೆಂಗಳೂರು:ನೀವು ಯಾವ ಪಕ್ಷಕ್ಕೆ ತಾನೇ ನಿಯತ್ತಾಗಿದ್ದೀರಿ ಸಿದ್ದರಾಮಯ್ಯನವರೇ? ನೀವು ಉಂಡ ಮನೆಗೆ ದ್ರೋಹ ಬಗೆದವರು ಎಂದು ಜೆಡಿಎಸ್ ಕಿಡಿಕಾರಿದೆ.

ಹೆಚ್​ಡಿಕೆ ಟ್ವೀಟ್​​

ಜೆಡಿಎಸ್​​​ನಿಂದ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್​​ನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಜೆಡಿಎಸ್ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪ ಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್​​ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಶಿಷ್ಯಂದಿರನ್ನ ನೀವೇ ಕಾಂಗ್ರೆಸ್​ನಿಂದ ಬಿಜೆಪಿಗೆ ಸೇರಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ್ರಿ. ಡಿಸಿಎಂ ಮಾಡಿದ ಜೆಡಿಎಸ್, ರಾಜಕೀಯ ಪಕ್ಷವೇ ಅಲ್ಲ ಅಂತೀರಲ್ಲ. ಹೋಗಲಿ ನಿಮ್ಮನ್ನ ಸಿಎಂ ಮಾಡಿದ ಕಾಂಗ್ರೆಸ್ ಮೇಲಾದ್ರು ನಿಯತ್ತಿದ್ಯಾಎಂದು ಟ್ವೀಟ್ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಭಾರತದ ಅತಿ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್‌ ಇಂದು ಯಾವ ಪರಿಸ್ಥಿತಿಯಲ್ಲಿದೆ, ಯಾವ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದೆ? ಎಲ್ಲೆಲ್ಲಿ ಯಾರು ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದ್ದಾರೆ? ಎಲ್ಲಿಲ್ಲಿ ಯಾರು ಯಾರಿಗೆ ಹೆಗಲಾಗಿದೆ? ಜೆಡಿಎಸ್‌ ಉಪ್ಪು ತಿಂದ ಆ ಮಹಾನ್‌ ನಾಯಕರು ಈ ಪ್ರಶ್ನೆಗಳಿಗೆ ಉತ್ತರ ನೀಡುವರೇ ಎಂದು ಪ್ರಶ್ನಿಸಿದ್ದಾರೆ.

ಹೆಚ್​ಡಿಕೆ ಟ್ವೀಟ್​​

ಮಿತ್ರಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ, ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್,‌ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ? ಕಾಂಗ್ರೆಸ್‌ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲ ಎಂದಿದ್ದಾರೆ.

2018ರ ಚುನಾವಣೆಯಲ್ಲಿ ‘ಮಹಾನ್‌ ನಾಯಕರ’ ‘ಅಪ್ಪನಾಣೆ’ ‘ತಿಪ್ಪರಲಾಗ’ದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಧಿಕಾರಕ್ಕೆ ಬಾರದು ಎಂದು ‘ಅಪ್ಪನಾಣೆ’ಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಈ ಉಪ ಚುನಾವವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ. ಅದಕ್ಕಾಗಿ ಕಾಯಲಿ ಎಂದು ತಿರುಗೇಟು ನೀಡಿದ್ದಾರೆ.

ABOUT THE AUTHOR

...view details