ಕರ್ನಾಟಕ

karnataka

ETV Bharat / state

ರೈತರ ಮೇಲೆ ಗುಂಡಿಕ್ಕಲು, ಕಾನೂನು ಅಸ್ತ್ರ ಪ್ರಯೋಗಕ್ಕೆ ಸರ್ಕಾರ ತುದಿಗಾಲಲ್ಲಿ ನಿಂತಂತಿದೆ: ಹೆಚ್​ಡಿಕೆ ಕಿಡಿ

ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶದ ಕುರಿತು ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರೈತರ ಮೇಲೆ ಗುಂಡಿಕ್ಕಲು, ಕಾನೂನು ಅಸ್ತ್ರ ಪ್ರಯೋಗಿಸಲು ತುದಿಗಾಲಲ್ಲಿ ನಿಂತಂತಿದೆ ಎಂದು ಟೀಕಿಸಿದ್ದಾರೆ.

hd kumarswamy tweet about government
ಹೆಚ್​ಡಿಕೆ ಕಿಡಿ

By

Published : Jun 7, 2020, 12:23 PM IST

ಬೆಂಗಳೂರು: ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹೆಚ್​ಡಿಕೆ ಟ್ವೀಟ್​​
ಹೆಚ್​ಡಿಕೆ ಟ್ವೀಟ್​​
ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿರುವ ಅವರು, ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಿಎಂ ಹೇಳಿರುವುದು ಮೂರ್ಖತನದ ಸೂಚನೆ. ರೈತರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್‌, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರ್ಯಾಕ್ಟರ್‌ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್‌ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಹೆಚ್​ಡಿಕೆ ಟ್ವೀಟ್​​
ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್‌ ಕಾರ್ಡ್‌ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ, ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್‌ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ ಎಂದು ಹೆಚ್​ಡಿಕೆ ತಿಳಿಸಿದ್ದಾರೆ.
ಹೆಚ್​ಡಿಕೆ ಟ್ವೀಟ್​​
ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ABOUT THE AUTHOR

...view details