ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ಎಲ್ಲಾ ಅಭ್ಯರ್ಥಿಗಳಿಗೂ ಶುಭಾಶಯಗಳು. ಈ ಬಾರಿ ಕರ್ನಾಟಕದಿಂದ ಸುಮಾರು 40 ಜನ ಆಯ್ಕೆ ಆಗಿರುವುದು ಒಳ್ಳೆಯ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಈ ಬಾರಿ ಆಯ್ಕೆ ಆಗದೇ ಇರುವವರು ಧೃತಿಗೆಡಬೇಡಿ. ಮುಂದಿನ ಬಾರಿ ಇನ್ನು ಹೆಚ್ಚಿನ ಪರಿಶ್ರಮ ಪಟ್ಟು ಕರ್ನಾಟಕದಿಂದ ಆಯ್ಕೆ ಆಗುವವರ ಸಂಖ್ಯೆಯನ್ನು ಹೆಚ್ಚಿಸೋಣ ಎಂದಿದ್ದಾರೆ. ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ ಎಲ್ಲ ಪ್ರತಿಭಾನ್ವಿತರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಆದರ್ಶ, ಕಠಿಣ ಪರಿಶ್ರಮ ಇತರರಿಗೆ ಮಾದರಿಯಾಗಲಿ ಎಂದು ಶ್ಲಾಘಿಸಿದ್ದಾರೆ.