ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಸುದೀರ್ಘ ಆಯಸ್ಸು, ಉತ್ತಮ ಆರೋಗ್ಯ ಕರುಣಿಸಿ ಇನ್ನಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ಶಕ್ತಿ ನೀಡಿ ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.