ಕರ್ನಾಟಕ

karnataka

ETV Bharat / state

ಜೆಡಿಎಸ್ ಅಭ್ಯರ್ಥಿ ಆಯ್ಕೆಗೆ ಮಹತ್ವದ ಸಭೆ ಕರೆದ ದೇವೇಗೌಡ್ರು - jds news

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ, ಜೆಡಿಎಸ್ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ನಾಳೆ ಮಹತ್ವದ ಸಭೆ ಕರೆದಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಆಯ್ಕೆ ಸಂಬಂಧ ನಾಳೆ ಮಹತ್ವದ ಸಭೆ ಕರೆದ ಹೆಚ್​​ಡಿಡಿ

By

Published : Oct 17, 2019, 3:00 PM IST

ಬೆಂಗಳೂರು:ರಾಜ್ಯದಲ್ಲಿ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಜೆಡಿಎಸ್​ ಮುಂಬರುವ ಉಪ ಚುನಾವಣೆ, ಸ್ಥಳೀಯ ಸಂಸ್ಥೆಗಳ ಹಾಗೂ ವಿಧಾನ ಪರಿಷತ್ ಚುನಾವಣೆಗೆ ತಯಾರಿ ನಡೆಸುತ್ತಿದೆ. ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ನಾಳೆ ಮಹತ್ವದ ಸಭೆ ಕರೆದಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಹಾಗೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿರುವ ಅಭ್ಯರ್ಥಿಗಳಿಗೆ ಆಹ್ವಾನ ನೀಡಲಾಗಿದೆ. ವಿಧಾನಸಭೆ ಉಪಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಪರಿಷತ್​ನ ಚುನಾವಣೆಗೆ ನಿರಂತರವಾಗಿ ಸಿದ್ಧತೆ ನಡೆಸಲಾಗುತ್ತಿದ್ದು, ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಮುಖಂಡರ ಅಭಿಪ್ರಾಯ ಪಡೆಯಲಾಗುತ್ತದೆ.

ದಾವಣಗೆರೆ, ತುಮಕೂರು, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಒಳಗೊಂಡಂತೆ ವಿಧಾನ ಪರಿಷತ್​ನ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಉದ್ದೇಶದಿಂದ ಈ ಸಭೆ ಕರೆಯಲಾಗಿದೆ. ಪದವೀಧರ ಕ್ಷೇತ್ರದ ಚುನಾವಣೆಗೆ ಎಲ್ಲರೂ ಒಟ್ಟಾಗಿ ಶ್ರಮಪಟ್ಟರೆ ಗೆಲುವು ನಮ್ಮ ಪಕ್ಷದ್ದಾಗಲಿದೆ. ಸಹಮತದಿಂದ ಅರ್ಹ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಎಲ್ಲರೂ ಸಹಕರಿಸಬೇಕಾಗಿದೆ ಎಂದು ಹೆಚ್​​ಡಿಡಿ ತಿಳಿಸಿದ್ದಾರೆ. ಈ ಜಿಲ್ಲೆಗಳಲ್ಲಿ ಪಕ್ಷದ ಗೆಲುವಿಗೆ ಹೆಚ್ಚಿನ ಅವಕಾಶವಿದೆ. ಅನುಕೂಲಕರ ವಾತಾವರಣವಿದೆ. ಪಕ್ಷದ ಎಲ್ಲ ಮುಖಂಡರು ಸಭೆಗೆ ಆಗಮಿಸಿ ಒಮ್ಮತದ ಅಭ್ಯರ್ಥಿ ಆಯ್ಕೆಗೆ ಸಹಮತ ವ್ಯಕ್ತಪಡಿಸಲು ಸಹಕರಿಸಬೇಕೆಂದು ಗೌಡರು ಮನವಿ ಮಾಡಿಕೊಂಡಿದ್ದಾರೆ.

ಗೌಪ್ಯ ಸಭೆ: ವಿಧಾನಪರಿಷತ್​ನ ಹಿರಿಯ ಸದಸ್ಯ, ಜೆಡಿಎಸ್​ನ ಬಸವರಾಜ ಹೊರಟ್ಟಿ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ. ಇನ್ನು ಕೆಲ ಶಾಸಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗ್ತಿದೆ. ಇತ್ತೀಚೆಗೆ ಉಪ ಸಭಾಪತಿ ಧರ್ಮೇಗೌಡರ ಮಗನ ಮದುವೆ ನೆಪದಲ್ಲಿ ಒಟ್ಟಿಗೆ ಸೇರಿದ್ದ ವಿಧಾನ ಪರಿಷತ್ ಸದಸ್ಯರು, ಮದುವೆ ಕಾರ್ಯಕ್ರಮದ ಬಳಿಕ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಗೌಪ್ಯ ಸಭೆ ನಡೆಸಿ ಪಕ್ಷದಲ್ಲಿ ಬಂಡಾಯದ ಬಾವುಟ ಹಾರಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ABOUT THE AUTHOR

...view details