ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರು ಇಂದು ನನ್ನೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದರು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ.
ದೇವೇಗೌಡ ದಂಪತಿಗೆ ಕೊರೊನಾ ಸೋಂಕು ತಗುಲಿದ್ದು, ಪರೀಕ್ಷೆಗೆ ಒಳಗಾದ ದೊಡ್ಡಗೌಡರಿಗೆ ನೆಗೆಟಿವ್ ಬಂದಿದೆ. ಅವರು ಜ್ವರದಿಂದ ಬಳಲುತ್ತಿದ್ದಾರೆ. ಗೌಡರ ಪತ್ನಿ ಚೆನ್ನಮ್ಮ ಅವರಿಗೆ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.