ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಹತ್ರಾಸ್‍ನಲ್ಲಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರಪ್ರದೇಶದ ಪೊಲೀಸರು ಕೆಲಕಾಲಕ್ಕೆ ವಶಕ್ಕೆ ಪಡೆದುಕೊಂಡಿದ್ದು ಸರಿಯಾದ ಕ್ರಮವಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ವಶಕ್ಕೆ ಪಡೆದ ನಡೆ ಸರಿಯಲ್ಲ: ಆದಿತ್ಯನಾಥ್ ಕಿವಿ ಹಿಂಡಿದ ದೊಡ್ಡ ಗೌಡರು - HDD tweet on Rahul Gandhi's arrest
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಮತ್ತಿತರ ನಾಯಕರನ್ನು ತುಂಬಾ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಉತ್ತರ ಪ್ರದೇಶ ಸಿಎಂಗೆ ಮನವಿ ಮಾಡಿದ್ದಾರೆ.
ಹೆಚ್ಡಿಡಿ
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು. ಅವರು ನ್ಯಾಯಯುತವಾಗಿ ಹೋರಾಟ ಮಾಡುತ್ತಿದ್ದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಮತ್ತಿತರ ನಾಯಕರನ್ನು ತುಂಬಾ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದು ಉತ್ತರ ಪ್ರದೇಶ ಸಿಎಂಗೆ ಮನವಿ ಮಾಡಿದ್ದಾರೆ.