ಕರ್ನಾಟಕ

karnataka

ETV Bharat / state

ಮಮತಾ ಬ್ಯಾನರ್ಜಿ ಶೀಘ್ರ ಗುಣಮುಖರಾಗಲಿ: ಎಚ್​ಡಿಡಿ, ಹೆಚ್‌ಡಿಕೆ ಹಾರೈಕೆ - hd kumarswamy tweet

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಮತಾ ಬ್ಯಾನರ್ಜಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಹೆಚ್.ಡಿ.ದೇವೇಗೌಡ ಹಾಗು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

hdk-and-hdd
hdk-and-hdd

By

Published : Mar 11, 2021, 2:53 PM IST

ಬೆಂಗಳೂರು:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದಲ್ಲ. ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ವ್ಯವಸ್ಥೆಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಂಗಾಳದಲ್ಲಿ ಅತ್ಯಂತ ಜನಪರ ಮತ್ತು ಸ್ವಚ್ಛ ಆಡಳಿತವನ್ನು ಮಮತಾ ಬ್ಯಾನರ್ಜಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜನಬೆಂಬಲ ಅಪಾರವಾಗಿದೆ. ಎಂಥ ಶಕ್ತಿಯ ವಿರುದ್ಧ ಹೋರಾಡಿಯಾದರೂ ಬಂಗಾಳವನ್ನು ಗೆಲ್ಲುವ ಶಕ್ತಿ ಮಮತಾ ಅವರಿಗಿದೆ. ಈ ಚುನಾವಣೆಯನ್ನು ಕೂಡಾ ಅವರು ಗೆಲ್ಲುತ್ತಾರೆ. ಅವರಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ. ನಾನು ಅವರ ಬೆಂಬಲಕ್ಕಿರುವೆ ಎಂದು ಹೇಳಿದ್ದಾರೆ.

ಶೀಘ್ರ ಗುಣಮುಖರಾಗಲಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಟ್ವೀಟ್ ಮಾಡಿ, ಸಹೋದರಿಯಂತೆ ಇರುವ ಮಮತಾ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ನನಗೆ ತುಂಬಾ ಕಾಳಜಿ ಇದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ABOUT THE AUTHOR

...view details