ಬೆಂಗಳೂರು:ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಾಯಿ ಚೆನ್ನಮ್ಮ ಅವರ ಆಶೀರ್ವಾದ ಪಡೆದರು. ಪದ್ಮನಾಭನಗರದ ನಿವಾಸಕ್ಕೆ ಇಂದು ತೆರಳಿದ ಹೆಚ್ಡಿಕೆ ಹಣೆಗೆ ತಾಯಿ ಚೆನ್ನಮ್ಮ ಕುಂಕುಮ ಇಟ್ಟು ಆಶೀರ್ವದಿಸಿದರು. ನಂತರ ಜೆಪಿ ನಗರದ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿ ಕುಟುಂಬ ಸದಸ್ಯರ ಜೊತೆ ಕೇಕ್ ಕತ್ತರಿಸಿ ಮಾಜಿ ಸಿಎಂ ಸಂಭ್ರಮಿಸಿದರು. ಈ ವೇಳೆ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವತಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೊಮ್ಮಗ ಅವ್ಯಾನ್ ದೇವ್ ಸಂಭ್ರಮದಲ್ಲಿ ಭಾಗಿಯಾಗಿದ್ದರು.
ಕುಟುಂಬದ ಜೊತೆ ಸರಳವಾಗಿ ಜನ್ಮದಿನ ಆಚರಿಸಿಕೊಂಡ ಹೆಚ್ಡಿಕೆ - ETV Bharath Kannada news
ಕುಟುಂಬ ಸದಸ್ಯರ ಜೊತೆ ಕೇಕ್ ಕತ್ತರಿಸಿ ಹೆಚ್ ಡಿ ಕುಮಾರಸ್ವಾಮಿ ಜನ್ಮದಿನ ಆಚರಿಸಿಕೊಂಡರು.
ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ರಾಜ್ಯಸಭೆ ಸದಸ್ಯ ಹೆಚ್.ಡಿ.ದೇವೇಗೌಡರು ದೆಹಲಿಯಲ್ಲಿ ಇರುವ ಕಾರಣ, ಟ್ವೀಟ್ ಮೂಲಕ ಮಗನಿಗೆ ಜನ್ಮದಿನದ ಶುಭ ಹಾರೈಸಿದರು. ನನ್ನ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ನೀಡಿ ಜನಸೇವೆ ಮಾಡಲು ಇನ್ನಷ್ಟು ಶಕ್ತಿ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಹಾಗೂ ನಿಮ್ಮ ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಯು ಯಶಸ್ವಿಯಾಗಲೆಂದು ಆಶಿಸುತ್ತೇನೆ ಎಂದು ಗೌಡರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ :ಸರಳವಾಗಿ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡ ಗೌಡರಿಗೆ ಗಣ್ಯರಿಂದ ಶುಭಾಶಯ!