ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕರಾದ ಎನ್ ಆರ್ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರ ಅಳಿಯ ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ಹಾಗು ಕನ್ನಡ ನೆಲದ ನಂಟು ಹೊಂದಿರುವ ಕನ್ಸರ್ವೇಟಿವ್ ಪಕ್ಷದ ನಾಯಕ ರಿಷಿ ಸುನಕ್ ಅವರ ಆಯ್ಕೆ ನನಗೆ ಅತೀವ ಸಂತಸ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರಿಷಿ ಸುನಕ್‌ಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ ಹೆಚ್ಡಿಕೆ - NR Narayana Murthy
ಆರ್ಥಿಕ ಸಂಕಷ್ಟದ ಕಾಲದಲ್ಲಿ ರಿಷಿ ಸುನಕ್ ಅವರು ಬ್ರಿಟನ್ ದೇಶದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಅವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಿಷಿ ಸುನಕ್ ಹಾಗೂ ಹೆಚ್ಡಿಕೆ
ಈ ಕುರಿತು ಟ್ವೀಟ್ ಮಾಡಿರುವ ಅವರು, ರಿಷಿ ಸುನಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಆರ್ಥಿಕ ಸಂಕಷ್ಟದ ಕಾಲದಲ್ಲಿ ಬ್ರಿಟನ್ ದೇಶದ ಚುಕ್ಕಾಣಿ ಹಿಡಿಯುತ್ತಿದ್ದು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಇದನ್ನೂ ಓದಿ:ಬ್ರಿಟನ್ಗೆ ಕರುನಾಡ ಅಳಿಯ ಪ್ರಧಾನಿ.. ರಿಷಿ ಸುನಕ್ ನೂತನ ಸಾರಥಿ