ಬೆಂಗಳೂರು: ಕೊರೊನಾ ವೈರಸ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಗಳ ಶಾಸಕರೊಂದಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದುಕೊಂಡರು.
ಕೊರೊನಾ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಶಾಸಕರಿಂದ ಮಾಹಿತಿ ಪಡೆದ ಹೆಚ್ಡಿಕೆ
ಮಾಜಿ ಸಿಎಂ ಹೆಚ್ಡಿಕೆ ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಿಸಿದರು. ಆಯಾ ಕ್ಷೇತ್ರದ ಶಾಸಕರೊಂದಿಗೆ ಸರ್ಕಾರದ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಿದರು.
ಮಾಜಿ ಸಿಎಂ ಹೆಚ್ಡಿಕೆ
ಇಲ್ಲಿನ ಜೆ.ಪಿ. ನಗರದ ತಮ್ಮ ನಿವಾಸದಿಂದಲೇ ಎಲ್ಲರನ್ನು ಸಂಪರ್ಕಿಸುವ ಕಾರ್ಯ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರೊಂದಿಗೆ ಪರಿಸ್ಥಿತಿ ಕುರಿತು ಕೂಲಂಕಷವಾಗಿ ವಿಚಾರಿಸಿದರು. ಕೊರೊನಾ ಸೋಂಕು ತಡೆಗೆ ಸರ್ಕಾರ ತೆಗೆದುಕೊಂಡ ಕ್ರಮಗಳು ಯಾವ ರೀತಿ ಅನುಷ್ಠಾನಕ್ಕೆ ಬರುತ್ತಿವೆ ಎಂಬುದನ್ನು ವಿಚಾರಿಸಿದರು.
ಇನ್ನು ವೈದ್ಯಕೀಯ ಪರಿಕರಗಳನ್ನು ಒದಗಿಸುವಂತೆ ಸೂಚನೆ ನೀಡಿದರು. ಸರ್ಕಾರ ನೀಡುತ್ತಿರುವ ವೈದ್ಯಕೀಯ ಪರಿಕರಗಳ ಬಗ್ಗೆಯೂ ಶಾಸಕರ ಜೊತೆ ಮಾತುಕತೆ ನಡೆಸಿದ ಕುಮಾರಸ್ವಾಮಿ, ಕೂಲಿ ಕಾರ್ಮಿಕರು ಹಾಗೂ ಬಡವರ ಮೇಲೆ ನಿಗಾ ವಹಿಸುವಂತೆ ಸಲಹೆ ನೀಡಿದರು.