ಬೆಂಗಳೂರು: ನಟ ದರ್ಶನ್ ಹಲ್ಲೆ ಮಾಡಿರುವ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇದು ಮತ್ತೊಂದು ರೀತಿಯ ತಿರುವು ಪಡೆಯಲಿದೆ. ಹಾಗಾಗಿ, ಇಂತಹ ವಿಚಾರದಲ್ಲಿ ಪ್ರತಿಕ್ರಿಯೆ ಕೊಡೋದಿಲ್ಲ ಎಂದರು.
ನಟ ದರ್ಶನ್ ಹಲ್ಲೆ ಆರೋಪ: ತಪ್ಪಿದ್ದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ- ಕುಮಾರಸ್ವಾಮಿ - attack on darshan
ಇಂದ್ರಜಿತ್ ಲಂಕೇಶ್ ಅವರು ದರ್ಶನ್ ಬಗ್ಗೆ ಆರೋಪ ಮಾಡಿದ್ದಾರೆ. ಈ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ತಪ್ಪಿದ್ದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ- ಕುಮಾರಸ್ವಾಮಿ
ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಇಂದು ಜಿಲ್ಲಾವಾರು ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಪ್ಪಿದ್ದರೆ ಸರ್ಕಾರ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಿ. ಈ ವಿಚಾರದಲ್ಲಿ ಹೆಚ್ಚಿಗೆ ಏನೂ ಹೇಳುವುದಿಲ್ಲ ಎಂದಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದು ಅವರವರಿಗೆ ಸೇರಿದ್ದು ಎಂದು ಮಾರ್ಮಿಕವಾಗಿ ನುಡಿದರು.