ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ಶಾಸಕರು ಹಾಗೂ ಮುಂದಿನ ವಿಧಾನಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಕುಗ್ರಾಮದ ಕಾರ್ಯಕರ್ತನನ್ನೂ ಕೂಡ ನಿರ್ಲಕ್ಷ್ಯ ಮಾಡುವ ಹಾಗಿಲ್ಲ ಎಂದು ಎಚ್ಚರಿಸಿದರು. ಇದೇ ವೇಳೆ, ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಅವರು ಮಾಹಿತಿ ನೀಡಿದರು.
ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹೆಚ್‌ಡಿಕೆ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್ ತೆಗೆದುಕೊಂಡರು. ಗೆಲ್ಲುವ ವಿಶ್ವಾಸ ಇಲ್ಲದಿದ್ದರೆ ಕಷ್ಟ. ಮುಖಂಡರು, ಕಾರ್ಯಕರ್ತರನ್ನು ನಿರ್ಲಕ್ಷಿಸಬಾರದು ಎಂದು ತಾಕೀತು ಮಾಡಿದರು.