ಕರ್ನಾಟಕ

karnataka

ETV Bharat / state

ಅಡಕೆ ಬೆಳೆಗಾರರ ಮೇಲೆ ಬರೆ ಎಳೆಯುವ ಕೇಂದ್ರದ ಹುನ್ನಾರ: ಹೆಚ್​​​ಡಿಕೆ - ಅಡಕೆ ಬೆಳೆಗಾರರ ಮೇಲೆ ಬರೆ ಎಳೆಯುವ ಹುನ್ನಾರ

ನೆರೆ ದೇಶ ಭೂತಾನ್ ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿರುವ ಕ್ರಮ ನಮ್ಮ ಅಡಕೆ ಬೆಳೆಗಾರರ ಮೇಲೆ ಬರೆ ಎಳೆಯುವ ಹುನ್ನಾರವಷ್ಟೆ ಎಂದು ಕೇಂದ್ರ ಸರ್ಕಾರದ ವಿರುದ್ದ ಹೆಚ್​ಡಿಕೆ ಕಿಡಿಕಾರಿದ್ದಾರೆ.

KN_BNG_03
ಹೆಚ್​.ಡಿ ಕುಮಾರಸ್ವಾಮಿ

By

Published : Oct 12, 2022, 7:28 PM IST

ಬೆಂಗಳೂರು: ಕೃಷಿಯನ್ನು ಕೇಂದ್ರ ಬಿಜೆಪಿ ಸರ್ಕಾರ ಇನ್ನಿಲ್ಲದಷ್ಟು ಕಡೆಗಣಿಸುತ್ತಿದೆ ಎನ್ನುವುದಕ್ಕೆ ಈಗ ಅಡಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳೇ ಸಾಕ್ಷಿ. ಹವಾಮಾನ ವೈಪರಿತ್ಯ ಹಾಗೂ ಎಲೆಚುಕ್ಕಿ ರೋಗದಿಂದ ಅಡಕೆ ಕೃಷಿಕರ ಬವಣೆ ಹೇಳತೀರದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರಾವಳಿ, ಮಲೆನಾಡು, ಹಾಸನ, ಕೊಡಗು ಸೇರಿ ಇನ್ನೂ ಹಲವಾರು ಜಿಲ್ಲೆಗಳಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಜಗತ್ತಿನಲ್ಲಿ ಅತಿಹೆಚ್ಚು ಅಡಕೆ ಬೆಳೆಯುವ ಭಾರತದಲ್ಲಿ, ಹೆಚ್ಚು ಫಸಲು ಬರುವುದೇ ನಮ್ಮ ರಾಜ್ಯದಲ್ಲಿ. ಆದರೆ, ಈ ಬೆಳೆ ತೆಗೆಯುವ ರಾಜ್ಯದ ರೈತರ ಬದುಕು ಕತ್ತಲೆಯಲ್ಲಿದೆ ಎಂದು ಹೇಳಿದ್ದಾರೆ.

ಅಡಕೆ ಬೆಳೆಯುವುದು ಎಂದರೆ ಕತ್ತಿಯ ಮೇಲಿನ ಸವಾರಿ ಎನ್ನುವುದರಲ್ಲಿ ಸಂಶಯವೇ ಇಲ್ಲ. ಅತಿವೃಷ್ಟಿ, ಅನಾವೃಷ್ಟಿ ಜತೆಗೆ, ನಿರಂತರ ರೋಗರುಜಿನಗಳು ರೈತರನ್ನು ಕಿತ್ತು ತಿನ್ನುತ್ತಿವೆ. ರಾಜ್ಯ ಸರಕಾರವು ಪರಿಣಾಮಕಾರಿ ಔಷಧ ಪತ್ತೆ ಹಚ್ಚಿ ಬೆಳೆಗಾರರಿಗೆ ಕಡಿಮೆ ದರದಲ್ಲಿ ಒದಗಿಸಬೇಕಿದೆ. ಬೆಳೆ ನಷ್ಟಕ್ಕೆ ಪರಿಹಾರವನ್ನು ಕೂಡ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಮೊದಲೇ ಸಂಕಷ್ಟದಲ್ಲಿರುವ ಅಡಿಕೆ ರೈತರ ಮೇಲೆ ಕೇಂದ್ರ ಸರಕಾರ ಹೊಸ ಭೂತವನ್ನು ಛೂ ಬಿಡುತ್ತಿದೆ. ನೆರೆ ದೇಶ ಭೂತಾನ್ ನಿಂದ 17,000 ಟನ್ ಹಸಿರು ಅಡಿಕೆ ಆಮದು ಮಾಡಿಕೊಳ್ಳುತ್ತಿರುವ ಕ್ರಮ ನಮ್ಮ ಅಡಕೆ ಬೆಳೆಗಾರರ ಮೇಲೆ ಬರೆ ಎಳೆಯುವ ಹುನ್ನಾರವಷ್ಟೆ ಎಂದು ಕಿಡಿಕಾರಿದ್ದಾರೆ.

ಅಡಕೆ ಬೆಳೆಯುತ್ತಾ ಅಡಕತ್ತರಿಯಲ್ಲಿ ಸಿಲುಕಿರುವ ರೈತರ ಹಿತ ಕಾಯುವುದು ರಾಜ್ಯ ಬಿಜೆಪಿ ಸರ್ಕಾರದ ಕರ್ತವ್ಯ. ಅವರ ಸಂಕಷ್ಟಕ್ಕೆ ಮಿಡಿಯುವುದು ಮಾತ್ರವಲ್ಲ, ಎಲ್ಲಾ ರೀತಿಯಲ್ಲೂ ನೆರವಿಗೆ ಧಾವಿಸಬೇಕು ಎಂದು ಹೆಚ್ ಡಿಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಜೆಡಿಎಸ್​ ಬಿಟ್ಟು ಸಿದ್ದರಾಮಯ್ಯ ನಂಬಿ ಬಂದಿದ್ದೇನೆ, ಈ ಬಾರಿ ಟಿಕೆಟ್​ ಕೊಡಲೇ ಬೇಕು : ಅಲ್ತಾಫ್ ಕಿತ್ತೂರು

ABOUT THE AUTHOR

...view details