ಬೆಂಗಳೂರು: ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾ ಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದಿದ್ದಾರೆ.