ಬೆಂಗಳೂರು :ಕೊರೊನಾ ವೈರಸ್ ನಿಯಂತ್ರಣ, ಲಾಕ್ಡೌನ್ ಕುರಿತಂತೆ ಇಂದು ಪ್ರಧಾನಿ ಅವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ರಾಜ್ಯದ ಸಿಎಂ ಯಡಿಯೂರಪ್ಪ ಕೂಡ ಇರಲಿದ್ದಾರೆ. ಈ ಸಭೆಯಲ್ಲಿ ಯಡಿಯೂರಪ್ಪ ರಾಜ್ಯಕ್ಕೆ 'ಕೋವಿಡ್-19 ಪ್ಯಾಕೇಜ್' ನೀಡುವಂತೆ ಮೋದಿ ಅವರನ್ನು ಆಗ್ರಹಿಸಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಪ್ರಧಾನಿ ಬಳಿ ಕೋವಿಡ್-19 ಪ್ಯಾಕೇಜ್ಗೆ ಆಗ್ರಹಿಸಿ.. ಸಿಎಂಗೆ ಸಲಹೆ ನೀಡಿದ ಹೆಚ್ಡಿಕೆ - HD Kumaraswami tweet
ಕಳೆದ 3 ದಿನಗಳ ಅಂಕಿಅಂಶ ಗಮನಿಸಿದರೆ ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ವೈದ್ಯಕೀಯ ಕ್ರಮಗಳನ್ನು ಬಿಗಿಗೊಳಿಸಬೇಕಿದೆ. ಜೊತೆಗೆ ನಷ್ಟಕ್ಕೊಳಗಾಗಿರುವ ಜನರಿಗೆ ಆರ್ಥಿಕ ಪರಿಹಾರ ನೀಡಬೇಕಿದೆ.
![ಪ್ರಧಾನಿ ಬಳಿ ಕೋವಿಡ್-19 ಪ್ಯಾಕೇಜ್ಗೆ ಆಗ್ರಹಿಸಿ.. ಸಿಎಂಗೆ ಸಲಹೆ ನೀಡಿದ ಹೆಚ್ಡಿಕೆ HDK](https://etvbharatimages.akamaized.net/etvbharat/prod-images/768-512-7149837-thumbnail-3x2-bng.jpg)
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ 3 ದಿನಗಳ ಅಂಕಿಅಂಶ ಗಮನಿಸಿದರೆ ರಾಜ್ಯದಲ್ಲಿ ಕೋವಿಡ್-19 ಹೆಚ್ಚುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ವೈದ್ಯಕೀಯ ಕ್ರಮಗಳನ್ನು ಬಿಗಿಗೊಳಿಸಬೇಕಿದೆ. ಜೊತೆಗೆ ನಷ್ಟಕ್ಕೊಳಗಾಗಿರುವ ಜನರಿಗೆ ಆರ್ಥಿಕ ಪರಿಹಾರ ನೀಡಬೇಕಿದೆ. ದೊಡ್ಡ ಮಟ್ಟದ ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ ಕೊಡುವ ಕರ್ನಾಟಕದಂತಹ ದೊಡ್ಡ ರಾಜ್ಯಕ್ಕೆ ಸೂಕ್ತ ಪ್ಯಾಕೇಜ್ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
'ಕೋವಿಡ್-19 ಪ್ಯಾಕೇಜ್' ಜೊತೆಗೆ ಜಿಎಸ್ಟಿ ಬಾಕಿ, ನೆರೆ-ಬರ ಪರಿಹಾರ ಸೇರಿದಂತೆ ಕೇಂದ್ರದಿಂದ ಬರಬೇಕಾದ ಇತರ ಬಾಕಿ ಹಣದ ಬಗ್ಗೆಯೂ ಬಿಎಸ್‌ವೈ ಮೋದಿ ಜೊತೆಗಿನ ಸಭೆಯಲ್ಲಿ ಕೇಳಬೇಕು. ಲಾಕ್ಡೌನ್ನಿಂದಾಗಿ ರಾಜ್ಯ ಹಣಕಾಸಿನ ತೊಂದರೆ ಅನುಭವಿಸುತ್ತಿದೆ. ಈ ಹೊತ್ತಲ್ಲಿ ಕೇಂದ್ರದಿಂದ ಸೂಕ್ತ ನೆರವು ಬಾರದ ಹೊರತು ಕೋವಿಡ್-19 ನಿಯಂತ್ರಣ ಕಷ್ಟವಾಗಲಿದೆ ಎಂದಿದ್ದಾರೆ.