ಬೆಂಗಳೂರು: ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇ. 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ ಎಂದಿದ್ದಾರೆ.