ಕರ್ನಾಟಕ

karnataka

ETV Bharat / state

'ಸಂಘರ್ಷ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಸಿಎಂ ದೃಢ ನಿಲುವು ಸ್ವಾಗತಾರ್ಹ' - ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್​

ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅನಾರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

HDKumaraswamy tweet on CM BSY
ಕುಮಾರಸ್ವಾಮಿ

By

Published : Apr 8, 2020, 2:45 PM IST

ಬೆಂಗಳೂರು: ಸಮುದಾಯಗಳ ನಡುವೆ ಪರಸ್ಪರ ಸಂಘರ್ಷಕ್ಕೆ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಮುಖ್ಯಮಂತ್ರಿಗಳು ತಾಳಿದ ದೃಢ ನಿಲುವು ಸೂಕ್ತ ಮತ್ತು ಸ್ವಾಗತಾರ್ಹ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಯಡಿಯೂರಪ್ಪನವರ ಸ್ಪಷ್ಟ ಎಚ್ಚರಿಕೆಯ ನಂತರವೂ ಅನೇಕ ಮಾಧ್ಯಮಗಳು ಸಂಕುಚಿತ ಮನೋಭಾವನೆಯ ದ್ವೇಷಕಾರಿಕೊಳ್ಳುತ್ತಿವೆ. ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅನಾರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ಅಪರಾಧಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ತಪ್ಪಿದ್ದಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುದ್ರಣ, ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸ್​ ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಹೆಚ್ಡಿಕೆ ಆಗ್ರಹಿಸಿದ್ದಾರೆ.

ನೀವು ತಳೆದ ನಿಲುವಿನ ಬಗ್ಗೆ ನಿಮ್ಮದೇ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳಾದ ನೀವು ಇಂತಹವುಗಳಿಗೂ ಕಡಿವಾಣ ಹಾಕಬೇಕಿದೆ ಎಂದು ಹೇಳಿದ್ದಾರೆ.

ABOUT THE AUTHOR

...view details