ಬೆಂಗಳೂರು: ಆರೋಗ್ಯ, ನೈರ್ಮಲ್ಯ ಕುರಿತ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.
ಆರೋಗ್ಯ, ನೈರ್ಮಲ್ಯ ಕುರಿತು ಜನ ಜಾಗೃತಿ ವಸ್ತು ಪ್ರದರ್ಶನ - ಅರಿವು
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆರೋಗ್ಯ ಹಾಗೂ ನೈರ್ಮಲ್ಯ ಕುರಿತಂತೆ ಜನಜಾಗೃತಿ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕುಡಿಯುವ ನೀರು, ನೈರ್ಮಲ್ಯ ಹಾಗೂ ಆರೋಗ್ಯ ಕುರಿತಂತೆ ಆಯೋಜಿಸಲಾಗಿದ್ದ ಜನಜಾಗೃತಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯ, ನೈರ್ಮಲೀಕರಣ, ಜಲಸಂರಕ್ಷಣೆ, ಸ್ವಚ್ಛತೆ ಸೇರಿದಂತೆ ಸರ್ಕಾರದ ಪ್ರಮುಖ ಯೋಜನೆಗಳ ಕುರಿತು ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತಿಳಿಯಬೇಕಾದ ಸಂಗತಿಗಳ ಬಗ್ಗೆ 2 ದಿನಗಳ ಕಾಲ ಜನ ಜಾಗೃತಿ ವಸ್ತು ಪ್ರದರ್ಶನವನ್ನು ಆಯೋಜಿಸಿದ್ದು, ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರಾಜೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಎಸ್. ಶಂಕರಪ್ಪ, ಸಹಾಯಕ ನಿರ್ದೇಶಕ ಮಹೇಶ್ ಎನ್.ಎಸ್. ಸೇರಿದಂತೆ ವಿವಿಧ ಶಾಲಾ-ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.