ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿನಿ ಬಡಾವಣೆಯಲ್ಲಿರುವ ಇಂಡಿಯನ್ ಹೈಸ್ಕೂಲ್ ನಲ್ಲಿಂದು ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಕನ್ನಡಕಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಗೋಪಾಲಯ್ಯ ಕ್ಷೇತ್ರದ ಜನರ ಉತ್ತಮ ಆರೋಗ್ಯಕ್ಕಾಗಿ ಪ್ರತಿ ತಿಂಗಳು ಎರಡು ಬಾರಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿ ಔಷಧಿಗಳನ್ನು ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರಿಗೆ ಇತರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲ ಮಾಡಿಕೊಡಲಾಗುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದು ಕರೆ ನೀಡಿದರು.
ಉಚಿತ ಕನ್ನಡಕ ವಿತರಣೆ:ಕಳೆದ ಭಾನುವಾರ ಇಂಡಿಯನ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೇತ್ರ ತಪಾಸಣೆಗೆ ಒಳಗಾಗಿದ್ದವರ ಪೈಕಿ ದೃಷ್ಟಿದೋಷವಿದ್ದ ಸುಮಾರು 250 ಜನರಿಗೆ ಇಂದು ಉಚಿತ ಕನ್ನಡಕಗಳನ್ನು ಸಚಿವರು ವಿತರಿಸಿದರು.