ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಆರೋಗ್ಯ ಸೇವೆ ಒದಗಿಸುವಂತೆ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.
ನೆರೆ ಸಂತ್ರಸ್ಥರಿಗೆ ಆರೋಗ್ಯ ಸೇವೆ ಒದಗಿಸಿ: ವೈಧ್ಯಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ! - ನೆರೆ ಸಂತ್ರಸ್ಥರಿಗೆ ಆರೋಗ್ಯ ಸೇವೆ ಒದಗಿಸಿ
ನೆರೆ ಪೀಡಿತ ಜಿಲ್ಲೆಗಳಿಗೆ ತೆರಳಿ ಆರೋಗ್ಯ ಸೇವೆ ಒದಗಿಸುವಂತೆ ವೈಧ್ಯಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆರೋಗ್ಯ ಸೇವೆ ಒದಗಿಸುವಂತೆ ವೈಧ್ಯಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ
ಕೂಡಲೇ ನೆರೆ ಪೀಡಿತ ಜಿಲ್ಲೆಗಳಿಗೆ ಹೋಗುವಂತೆ ಜಿಲ್ಲಾ ವೈಧ್ಯಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಮೂಲಕ ಸರ್ಕಾರವೂ ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಹಾವೇರಿ, ಉತ್ತರ ಕನ್ನಡ, ಕೊಡಗು, ಗದಗ, ಚಿಕ್ಕಮಗಳೂರು, ಶಿವಮೊಗ್ಗ, ಬೀದರ್, ಬೆಳಗಾವಿ , ಚಿಕ್ಕೋಡಿ, ರಾಯಚೂರು, ಬಾಗಲಕೋಟೆ, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ, ಬಳ್ಳಾರಿ, ಹಾಸನ, ಉಡುಪಿ, ಕಲಬುರಗಿ ಜಿಲ್ಲೆಯ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜೊತೆಗೆ ಪ್ರತಿ ದಿನದ ವರದಿಯನ್ನು ಇಲಾಖೆಯ ನಿರ್ದೇಶಕರಿಗೆ ಅಂದೇ ನೀಡಲು ತಿಳಿಸಲಾಗಿದೆ.