ಕರ್ನಾಟಕ

karnataka

ETV Bharat / state

ಹೈ ರಿಸ್ಕ್ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ - ಕೋವಿಡ್ ಟೆಸ್ಟ್

ಹೈ ರಿಸ್ಕ್ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಅವರು ಹೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

By ETV Bharat Karnataka Team

Published : Jan 10, 2024, 9:01 PM IST

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು :ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಎರಡನೇ ಬಾರಿ ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಲಾಯಿತು. ಸಮಾಜ ಕಲ್ಯಾಣ ಸಚಿವರಾದ ಹೆಚ್. ಸಿ ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿಯೇ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್​ಗಳನ್ನ ನಡೆಸಲಾಗ್ತಿದೆ ಎಂದರು. ಕೋವಿಡ್ ಇಳಿಮುಖ ಕಾಣುವವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುವುದಾಗಿ ಹೇಳಿದರು. ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ಚಿಡುವ ಕೆಲಸವನ್ನ ಸರ್ಕಾರ ಮಾಡುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿಯೇ ಟೆಸ್ಟಿಂಗ್ ನಡೆಸಿ, ಅಗತ್ಯ ಚಿಕಿತ್ಸೆ ಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರಸ್ತುತ ಐ.ಸಿ.ಯು ನಲ್ಲಿ ಕೋವಿಡ್ 19 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಇವರ ಮೇಲೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ. ಅಲ್ಲದೇ ಕೋವಿಡ್ ಪಾಸಿಟಿವ್ ಬಂದವರ ಸಂಪರ್ಕದಲ್ಲಿದ್ದವರಲ್ಲಿ ಹೈ ರಿಸ್ಕ್ ರೋಗಲಕ್ಷಣ ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಮಾಡುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಡೆತ್ ಆಡಿಟ್​ನಲ್ಲಿ 2 ಸಾವಿಗೆ ನೇರ ಕೋವಿಡ್ ಕಾರಣ:ಕೋವಿಡ್ ಪಾಸಿಟಿವ್ ಬಂದವರಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡೆತ್ ಆಡಿಟ್ ಮಾಡಲು ಸೂಚಿಸಲಾಗಿತ್ತು. 26 ಪ್ರಕರಣಗಳಲ್ಲಿ 21 ಜನರ ಡೆತ್ ಆಡಿಟ್ ನಡೆಸಲಾಗಿದ್ದು, ನೈಜವಾಗಿ ಕೋವಿಡ್ ಕಾರಣದಿಂದ ಇಬ್ಬರು ಮಾತ್ರ ಸಾವಿಗೀಡಾಗಿದ್ದಾರೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಉಳಿದ 18 ಮಂದಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಆದರೆ, ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಜನರು ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.

ಇದನ್ನೂ ಓದಿ:ರಾಜ್ಯದಲ್ಲಿ 34 JN.1 ಸೋಂಕಿತರು ಪತ್ತೆ, ನಾಳೆ ಸಂಪುಟ ಉಪ ಸಮಿತಿ ಸಭೆ: ಸಚಿವ ದಿನೇಶ್ ಗುಂಡೂರಾವ್

ABOUT THE AUTHOR

...view details