ಕರ್ನಾಟಕ

karnataka

ETV Bharat / state

ಕೊರೊನಾ ಕುರಿತು ಮಾಹಿತಿ ನೀಡುವ ಜವಾಬ್ದಾರಿ ಯಾರ ಹೆಗಲಿಗೆ? - ಎಸ್​​​​ಎಸ್​​​​ಎಲ್​​​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ

ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮಲು ಅವರನ್ನು ಕೇಳಿದರೆ, ಎಸ್​​​​ಎಸ್​​​​ಎಲ್​​​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಭೆ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತಿಳಿಸಲಾಗುತ್ತೆ ಎಂದು ಹೇಳಿದ್ದಾರೆ.

Health Minister Sriramulu press meet
ಆರೋಗ್ಯ ಸಚಿವ ಶ್ರೀರಾಮುಲು

By

Published : Jun 1, 2020, 6:37 PM IST

ಬೆಂಗಳೂರು :ಎಸ್​​​​ಎಸ್​​​​ಎಲ್​​​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಇದೇ ಜೂನ್​​​ನಲ್ಲಿ ನಡಿಯುತ್ತಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯು ಜವಾಬ್ದಾರಿಯೊಂದಿಗೆ ಸಕಲ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದೆ. ಈ ಕಾರಣದಿಂದಾಗಿ ಸಚಿವ ಸುರೇಶ್ ಕುಮಾರ್ ಅವರಿಗೆ ವಹಿಸಿದ್ದ ಕೋವಿಡ್-19 ಕುರಿತು ಮಾಹಿತಿ ನೀಡುವ ಜವಾಬ್ದಾರಿ ನಿನ್ನೆಯೇ ಮುಗಿದಿದೆ.

ಇದೀಗ ಇವತ್ತಿನ ಕೊರೊನಾ ವೈರಸ್ ಬಗೆಗಿನ ಮಾಹಿತಿಯನ್ನ ಯಾರು ನೀಡುತ್ತಾರೆ ಎಂಬ ಪ್ರಶ್ನೆ ಮೂಡುತ್ತಿದೆ. ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಇಬ್ಬರಲ್ಲಿ ಮಾಹಿತಿ ನೀಡುವವರು ಯಾರು? ಕೊರೊನಾ ಜವಾಬ್ದಾರಿ ಹೊರುವವರು ಯಾರು ಎಂಬ ಪ್ರಶ್ನೆ ಕಾಡಿದೆ.

ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮಲು ಅವರನ್ನು ಕೇಳಿದರೆ, ಎಸ್​​​​ಎಸ್​​​​ಎಲ್​​​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಭೆ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತಿಳಿಸಲಾಗುತ್ತೆ ಎಂದು ಹೇಳಿದ್ದಾರೆ. ಇತ್ತ ಆರೋಗ್ಯ ಇಲಾಖೆಯ ಅಧಿಕಾರಿಗಳು, ಅನಿವಾರ್ಯ ಕಾರಣದಿಂದಾಗಿ ಇಂದು ಬ್ರೀಫಿಂಗ್ ಇರೋದಿಲ್ಲ. ಕೇವಲ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡೋದಾಗಿ ಹೇಳಿದ್ದಾರೆ.

ABOUT THE AUTHOR

...view details