ಕರ್ನಾಟಕ

karnataka

ETV Bharat / state

ಕೊರೊನಾ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ - ಕೊರೊನಾ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹಿನ್ನೆಲೆ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ ಆರಂಭಗೊಂಡಿದ್ದು, ಮಹತ್ವದ ಚರ್ಚೆ ನಡೆಯುತ್ತಿದೆ.

health-minister-sudhakar-meeting-on-increase-in-corona-case
ಕೊರೊನಾ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ

By

Published : Mar 18, 2021, 1:11 PM IST

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆರಂಭವಾಗಿರುವ ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ವೈದ್ಯಕೀಯ ಇಲಾಖೆ ಪ್ರಧಾನ ಕಾರ್ಯ ಅನಿಲ್ ಕುಮಾರ್, ಆರೋಗ್ಯ ಇಲಾಖೆ ಪ್ರಧಾನಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ತ್ರಿಲೋಕ ಚಂದ್ರ, ರಾಜೀವ್ ಗಾಂಧಿ ವಿವಿ ಕುಲಪತಿ ಸಚ್ಚಿದಾನಂದ ಬಾಬು ಸೇರಿದಂತೆ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

ಕೊರೊನಾ ಎರಡನೇ ಅಲೆ ಹಿನ್ನೆಲೆ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ. ಕೊರೊನಾ ಎರಡನೇ ಅಲೆ ನಿಯಂತ್ರಣ ಪರಿಣಾಮಕಾರಿಯಾಗಿ ಮಾಡುವುದು ಹೇಗೆ? ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಕೊಠಡಿಗಳ ವ್ಯವಸ್ಥೆ, ಸೋಂಕಿತರಿಗಾಗಿ ಹಾಸಿಗೆಗಳ ಮೀಸಲು, ವೆಂಟಿಲೇಟರ್, ಆಕ್ಸಿಜನ್​ಗೆ ವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆ.

ಸಭೆಯಲ್ಲಿ ನಡೆದ ಚರ್ಚೆಯ ಕುರಿತು ಬಳಿಕ ಸುದ್ದಿಗೋಷ್ಠಿ ನಡೆಸಿ ಸುಧಾಕರ್ ಮಾತನಾಡಲಿದ್ದಾರೆ.

ABOUT THE AUTHOR

...view details