ಕರ್ನಾಟಕ

karnataka

ETV Bharat / state

ಆರೋಗ್ಯ ಇಲಾಖೆಯಲ್ಲಿನ ವರ್ಗಾವಣೆಗೆ ಕೌನ್ಸೆಲಿಂಗ್ ಕಡ್ಡಾಯ.. ಇನ್ಮುಂದೆ ಲಾಬಿಗೆ ಬ್ರೇಕ್.. ಸಚಿವ ಸುಧಾಕರ್ - ಆರೋಗ್ಯ ಇಲಾಖೆ ಲೇಟೆಸ್ಟ್ ನ್ಯೂಸ್

ಆಯುಷ್ ಇಲಾಖೆಯಡಿಯ ಫಿಸಿಶಿಯನ್ ಗ್ರೇಡ್ 1, ಗೇಡ್ 2ಗೆ ಆಯುಷ್ ಇಲಾಖೆಯ ನಿರ್ದೇಶಕರು, ಆಯುಷ್ ಇಲಾಖೆಯ ಗ್ರೂಪ್ ಬಿ,ಸಿ,ಡಿ ನೌಕರರಿಗೆ ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು. ಗ್ರೂಪ್-ಎಗೆ ಮೂರು ವರ್ಷ, ಗ್ರೂಪ್-ಬಿಗೆ ನಾಲ್ಕು ವರ್ಷ, ಗ್ರೂಪ್-ಸಿಗೆ ಐದು ವರ್ಷ, ಗ್ರೂಪ್-ಡಿಗೆ ಏಳು ವರ್ಷ ಒಂದು ಕಡೆ ಕಡ್ಡಾಯವಾಗಿ ಸೇವೆ ಸಲ್ಲಿಸಲು ನಿಯಮದಲ್ಲಿ ತಿಳಿಸಲಾಗಿದೆ..

Minister Sudhakar
ಸಚಿವ ಸುಧಾಕರ್

By

Published : Aug 18, 2021, 6:43 PM IST

ಬೆಂಗಳೂರು :ಅನಿಯಮಿತ ವರ್ಗಾವಣೆಗೆ ಬ್ರೇಕ್ ಹಾಕುವ ದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸೆಲಿಂಗ್ ಕಡ್ಡಾಯಗೊಳಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮಕ್ಕೆ ಆರೋಗ್ಯ ಸಚಿವ ಡಾ ಸುಧಾಕರ್ ಮುಂದಾಗಿದ್ದಾರೆ.

ಇಲಾಖೆಯ ಕಾರ್ಯ ನಿರ್ವಹಣೆಯಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ದಕ್ಷತೆ ತರಲಾಗಿದೆ. ಇದರಿಂದಾಗಿ ಇನ್ಮುಂದೆ ಸಾರ್ವಜನಿಕರಿಗೆ ಯಾವುದೇ ಅಡ್ಡಿ ಇಲ್ಲದೆ ಸಮರ್ಪಕ ಆರೋಗ್ಯ ಸೇವೆ ಲಭ್ಯವಾಗಲಿದೆ. ಇದರಿಂದ ವರ್ಗಾವಣೆ ಲಾಬಿಗಳಿಗೆ ತಡೆ ಬಿದ್ದಿದೆ.

ಇಲಾಖೆಯ ವ್ಯಾಪ್ತಿಯ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011ರ ಅನ್ವಯ ಕೌನ್ಸೆಲಿಂಗ್ ಮೂಲಕ ಮಾತ್ರ ಕೈಗೊಳ್ಳುವಂತೆ ಸ್ಪಷ್ಟ ಆದೇಶವಿದೆ.

ಈ ಕಾಯ್ದೆಯ ಕಲಂ 5ರಲ್ಲಿ ಆಡಳಿತಾತ್ಮಕ ಹುದ್ದೆಗಳಿಗೆ ಕೌನ್ಸೆಲಿಂಗ್​​ನಿಂದ ವಿನಾಯಿತಿ ನೀಡಲಾಗಿದೆ. ಅಂತಹ ಪ್ರಸ್ತಾವಗಳನ್ನು ಸಚಿವರಿಗೆ ಕಳುಹಿಸಲಾಗುತ್ತದೆ. ಆದರೆ, ಇತರೆ ವರ್ಗಾವಣೆ ಪ್ರಸ್ತಾವಗಳನ್ನು ಕಳುಹಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಕಡತ ನಿರ್ವಹಿಸುವ ವಿಷಯ ನಿರ್ವಾಹಕರು ಸೇರಿದಂತೆ ಸಂಬಂಧಿಸಿದ ಎಲ್ಲರ ವಿರುದ್ಧ ಇಲಾಖೆ ಶಿಸ್ತು ಕ್ರಮ ಜರುಗಿಸಬೇಕೆಂದು ಸಚಿವರು ಸೂಚಿಸಿದ್ದಾರೆ.

ಕೌನ್ಸೆಲಿಂಗ್ ವಿನಾಯಿತಿ :ಗಂಭೀರ ಹಾಗೂ ಮಾರಣಾಂತಿಕ ರೋಗದಿಂದ ಬಳಲುತ್ತಿರುವವರಿಗೆ, ವಯೋ ನಿವೃತ್ತಿ ಅಂಚಿನಲಿದ್ದವರಿಗೆ, ಇನ್ನು ಎರಡು ವರ್ಷ ಮಾತ್ರ ಸೇವೆ ಬಾಕಿ ಇರುವವರಿಗೆ, ಶೇ.40ಕ್ಕೂ ಹೆಚ್ಚು ಅಂಗವೈಕಲ್ಯ ಹೊಂದಿರುವವರಿಗೆ, ವಿಧವೆಯರು, ಪತಿ-ಪತ್ನಿ ಪ್ರಕರಣಕ್ಕೆ ಮಾತ್ರ ಕೌನ್ಸೆಲಿಂಗ್​​​ನಿಂದ ವಿನಾಯಿತಿ ನೀಡಬೇಕು.

ಇಂತಹ ಪ್ರಸ್ತಾವಗಳನ್ನು ಅಪರ ಮುಖ್ಯ ಕಾರ್ಯದರ್ಶಿಯವರ ಸ್ಪಷ್ಟ ಶಿಫಾರಸ್ಸಿನೊಂದಿಗೆ ಕಡತವನ್ನು ಎರಡು ತಿಂಗಳಿಗೊಮ್ಮೆ ಮಾತ್ರ ಸಚಿವರ ಅನುಮೋದನೆಗೆ ಸಲ್ಲಿಸಬೇಕು. ಈ ಕುರಿತು ಕಾಯ್ದೆಯಲ್ಲಿ ಅವಶ್ಯಕ ತಿದ್ದುಪಡಿ ತರಲು ಮುಂದಿನ ಕ್ರಮಕೈಗೊಳ್ಳುವಂತೆ ಸಚಿವರು ತಿಳಿಸಿದ್ದಾರೆ.

ನಿಯಮದಲ್ಲೇನಿದೆ?:ಹಿರಿಯ ತಜ್ಞರು, ತಜ್ಞರು, ಉಪಮುಖ್ಯ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ಮುಖ್ಯ ದಂತ ವೈದ್ಯಾಧಿಕಾರಿ, ಹಿರಿಯ ದಂತ ವೈದ್ಯಾಧಿಕಾರಿ, ದಂತ ವೈದ್ಯಾಧಿಕಾರಿಗಳ ವರ್ಗಾವಣೆಯನ್ನು ಇಲಾಖೆಯ ಆಯುಕ್ತರು ಮಾಡಬಹುದು. ಗ್ರೂಪ್ ಬಿ, ಸಿ, ಡಿ ನೌಕರರನ್ನು ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು.

ಆಯುಷ್ ಇಲಾಖೆಯಡಿಯ ಫಿಸಿಶಿಯನ್ ಗ್ರೇಡ್ 1, ಗೇಡ್ 2ಗೆ ಆಯುಷ್ ಇಲಾಖೆಯ ನಿರ್ದೇಶಕರು, ಆಯುಷ್ ಇಲಾಖೆಯ ಗ್ರೂಪ್ ಬಿ,ಸಿ,ಡಿ ನೌಕರರಿಗೆ ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು. ಗ್ರೂಪ್-ಎಗೆ ಮೂರು ವರ್ಷ, ಗ್ರೂಪ್-ಬಿಗೆ ನಾಲ್ಕು ವರ್ಷ, ಗ್ರೂಪ್-ಸಿಗೆ ಐದು ವರ್ಷ, ಗ್ರೂಪ್-ಡಿಗೆ ಏಳು ವರ್ಷ ಒಂದು ಕಡೆ ಕಡ್ಡಾಯವಾಗಿ ಸೇವೆ ಸಲ್ಲಿಸಲು ನಿಯಮದಲ್ಲಿ ತಿಳಿಸಲಾಗಿದೆ.

ಓದಿ: ರಾಜಕೀಯ ಜಂಜಾಟ ಬದಿಗಿಟ್ಟು ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ರಾ ಮಾಜಿ ಸಿಎಂ ಬಿಎಸ್​ವೈ!?

ABOUT THE AUTHOR

...view details