ಬೆಂಗಳೂರು:ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಪೂರಕ ವಾತಾವರಣ: ಸಿಎಂ ಬಿಎಸ್ವೈ - ಕರ್ನಾಟಕ ಪ್ರವಾಸೋದ್ಯಮ ಕಾರ್ಯಕ್ರಮ
ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಪ್ರವಾಸೋದ್ಯಮ ನೀತಿ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಬಿಎಸ್ವೈ, ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸುವುದಾಗಿ ಭರವಸೆ ನೀಡಿದರು.

ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
'ಕರ್ನಾಟಕ ಪ್ರವಾಸೋದ್ಯಮ ನೀತಿ 2020-25' ಬಗ್ಗೆ ಎರಡು ದಿನಗಳ ಕಾರ್ಯಾಗಾರ ಉದ್ಫಾಟಿಸಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಪ್ರವಾಸೋದ್ಯಮ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಈಗಾಗಲೇ 144 ಕಾಮಗಾರಿಗಳಿಗೆ 105 ಕೋಟಿ ರೂ ವೆಚ್ಚದಲ್ಲಿ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ವಿಫುಲ ಅವಕಾಶವಿದ್ದು ಶೇ.14ರಷ್ಟು ಇರುವ ಆರ್ಥಿಕ ವೃದ್ಧಿ ದರವನ್ನು ಹೆಚ್ಚಿಸಲು ಅವಕಾಶವಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಪ್ರವಾಸೋದ್ಯಮ ಕಾರ್ಯಪಡೆ ಅಧ್ಯಕ್ಷೆ ಸುಧಾಮೂರ್ತಿ ಇದ್ದರು.