ಬೆಂಗಳೂರು :ವಕ್ಫ್ ಆಸ್ತಿಯಲ್ಲಿನ ಬಾಡಿಗೆದಾರರ ತೆರವಿಗೆ ಸಂಬಂಧಿಸಿದ ವ್ಯಾಜ್ಯವನ್ನು ವಕ್ಫ್ ನ್ಯಾಯಾಧಿಕರಣ ಮಾತ್ರವೇ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ವಕ್ಫ್ ಆಸ್ತಿಯಲ್ಲಿ ನಿರ್ಮಾಣವಾಗಿರುವ ಮೈಸೂರಿನ ಸಯ್ಯಾಜಿ ರಸ್ತೆಯ ರಿಫಾ ಸಂಕೀರ್ಣದಲ್ಲಿರುವ ಮಳಿಗೆಗಳ ತೆರವು ಕೋರಿ ಕರ್ನಾಟಕ ವಕ್ಫ್ ಮಂಡಳಿಯ ಮುಖ್ಯ ಕಾರ್ಯಕಾರಿ ಅಧಿಕಾರಿ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಂಕೀರ್ಣದ ಮಳಿಗೆಗಳ ಬಾಡಿಗೆದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ಮಾಡಿದೆ.