ಬೆಂಗಳೂರು:ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಕಾಲ ಕರ್ಫ್ಯೂ ವಿಧಿಸಿತ್ತು. ಇದೀಗ ಕರ್ಫ್ಯೂ 5ನೇ ದಿನಕ್ಕೆ ಕಾಲಿಟ್ಟಿದೆ.
5ನೇ ದಿನಕ್ಕೆ ಕಾಲಿಟ್ಟ ಕರ್ಫ್ಯೂ: ಪರಿಷ್ಕೃತ ಆದೇಶ ಹೊರಡಿಸಿದ್ದರೂ ಮಾರುಕಟ್ಟೆಗಳಲ್ಲಿ ಜನಜಂಗುಳಿ
ಕೊರೊನಾ ಕರ್ಫ್ಯೂ ಜಾರಿಯಾಗಿ 5 ದಿನಗಳಾಗಿದೆ. ಆದರೆ ಜನರು ಮಾತ್ರ ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದೆ ಎಂದಿನಂತೆ ವ್ಯಾಪಾರ ವಹಿವಾಟು ಮುಂದುವರೆಸಿದ್ದಾರೆ.
ಮಾರುಕಟ್ಟೆಗಳಲ್ಲಿ ಜನ ಜಂಗುಳಿ
ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರೂ ಸಹ ತರಕಾರಿ ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಎಂದಿನಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಜನರು ಕ್ಯಾರೇ ಎನ್ನುತ್ತಿಲ್ಲ.
ಇನ್ನು ಇಂದು ಭಾನುವಾರವಾಗಿದ್ದರಿಂದ ಜನರು ಮಾರುಕಟ್ಟೆಗೆ ಧಾವಿಸಿದ್ದಾರೆ. ಮಾರುಕಟ್ಟೆಯಲ್ಲಿ ಮಾರ್ಷಲ್ಗಳು ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರೂ ಸಹ ಜನರು ತಮ್ಮ ವ್ಯಾಪಾರ ವಹಿವಾಟಿನಲ್ಲಿ ಮಗ್ನರಾಗಿದ್ದಾರೆ.