ಬೆಂಗಳೂರು:ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ವ್ಯಾಪ್ತಿಯ ಪ್ರದೇಶದಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ 238 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. 265ಕ್ಕೂ ಹೆಚ್ಚು ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದು, ವಿದ್ಯುತ್ ಪೂರೈಕೆಗೂ ಅಡಚಣೆಯಾಗಿದೆ.
ತುಮಕೂರು, ಕುಣಿಗಲ್, ನೆಲಮಂಗಲ ಹಾಗೂ ಚಿಕ್ಕಬಳ್ಳಾಪುರ ವಿಭಾಗಗಳಲ್ಲಿ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿದವು. ಮರಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ. ತುಮಕೂರು, ತಿಪಟೂರು, ಕುಣಿಗಲ್, ನೆಲಮಂಗಲ, ಕನಕಪುರ, ಚಿಕ್ಕಬಳ್ಳಾಪುರ, ವಿಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಆದಷ್ಟು ಬೇಗ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆಸ್ಕಾಂ ಅಧಿಕಾರಿಗಳು ಹೇಳಿದರು.