ಬೆಂಗಳೂರು:ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತಾಗೆ ಕರೆ ಮಾಡಿದ ಸಿಎಂ, ಹೆಚ್ಚಿನ ನಿಗಾ ಇಡುವಂತೆ ಸೂಚಿಸಿದ್ದಾರೆ.
ವರುಣಾರ್ಭಟ: ನಿಗಾ ವಹಿಸುವಂತೆ ಬಿಬಿಎಂಪಿ ಆಡಳಿತಾಧಿಕಾರಿ, ಉಡುಪಿ ಡಿಸಿಗೆ ಸಿಎಂ ಸೂಚನೆ
ಬೆಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಲ್ಲುವ ಸಾಧ್ಯತೆ ಹೆಚ್ಚಿದ್ದು, ರಾಜಕಾಲುವೆ ಮತ್ತು ತಗ್ಗು ಪ್ರದೇಶಗಳತ್ತ ಹೆಚ್ಚು ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ಯಾವುದೇ ಕ್ಷಣದಲ್ಲಾದರೂ ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಉಡುಪಿ ಡಿಸಿಗೆ ಕರೆ:ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ವೈ, ಉಡುಪಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗೆ ಕರೆ ಮಾಡಿ, ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.