ಕರ್ನಾಟಕ

karnataka

ETV Bharat / state

ಭಾರಿ ಮಳೆ ಸಂಭವ: ಇನ್ನೆರಡು ದಿನ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ - ಹವಾಮಾನ ವರದಿ

ಮುಂದಿನ ವಾರದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಕಾರಣ ಮಳೆ ಪ್ರಮಾಣ ಸಾಮಾನ್ಯ ಮಟ್ಟಕ್ಕೆ ತಲುಪಬಹುದು ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ತಜ್ಞರಾದ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

Meteorological Department forecast
ನಾಳೆಯಿಂದ ಮಳೆಯ ಆರ್ಭಟ: ಇನ್ನೆರೆಡು ದಿನ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

By

Published : Jul 2, 2020, 2:14 PM IST

Updated : Jul 2, 2020, 2:57 PM IST

ಬೆಂಗಳೂರು: ಜೂ. 1ರಿಂದ ಇಲ್ಲಿಯವರೆಗೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ವಾಡಿಕೆಗಿಂತ ಮಳೆ ಕೊರತೆ ಕಂಡು ಬಂದಿದೆ. ಮುಂದಿನ ವಾರದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಕಾರಣ ಮಳೆ ಪ್ರಮಾಣ ಸಾಮಾನ್ಯ ಮಟ್ಟಕ್ಕೆ ತಲುಪಬಹುದು ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ತಜ್ಞ ಸಿ.ಎಸ್.ಪಾಟೀಲ್

ಉತ್ತರಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಜುಲೈ 2, 3 ಹಾಗೂ 4ರಂದು ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ, ಈ 3 ದಿನ ಆರೆಂಜ್​ ಅಲರ್ಟ್ ನೀಡಲಾಗಿದೆ. ಜು. 5-6 ರಂದು ಮಳೆ ಪ್ರಮಾಣ ತಗ್ಗಬಹುದಾದರೂ ಕೆಲವೆಡೆ ಮಳೆಯ ಅಬ್ಬರ ಜಾಸ್ತಿ ಇರಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ 5-6ರಂದು ಕೆಲವು ಕಡೆ ಮಳೆಯಾಗಬಹುದು ಎಂದು ಅವರು ಹೇಳಿದರು.

ಜು.2-3 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ, ಬೀದರ್, ಗುಲ್ಬರ್ಗಾ, ವಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿ.ಮೀ ಇರುವುದರಿಂದ ಇಂದು ಮತ್ತು ನಾಳೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ ಎಂದು ಸಿ.ಎಸ್. ಪಾಟೀಲ್ ತಿಳಿಸಿದರು.

ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲಿ ಮಾತ್ರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಗರಿಷ್ಠ ಮಳೆ ಉಡುಪಿಯ ಜಿಲ್ಲೆಯ ಕೊಲ್ಲೂರಿನ 8.1 ಸೆಂಟಿ ಮೀಟರ್ ಮಳೆ ಪ್ರಮಾಣ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ಹಾಗೂ ಪೂರ್ವ ಅರಬ್ಬಿ ಸಮುದ್ರದಲ್ಲಿ ಮಳೆ ಮೋಡ ಇರುವುದರಿಂದ ಮುಂದಿನ 5 ದಿನ ಹಗುರದಿಂದ ಸಾಧಾರಣವಾಗಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

Last Updated : Jul 2, 2020, 2:57 PM IST

ABOUT THE AUTHOR

...view details