ಬೆಂಗಳೂರು: ನಗರದಲ್ಲಿ ಇಂದು ಮತ್ತೆ ನಾಳೆ ಕೆಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ - bangalore latest news
ಬೆಂಗಳೂರಿನಲ್ಲಿ ಇಂದು ಮತ್ತೆ ನಾಳೆ ಕೆಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ
ಈ ಕುರಿತು ಮಾಹಿತಿ ನೀಡಿರುವ ಸಿಎಸ್ ಪಾಟೀಲ್, ವಾಯುಭಾರ ಕುಸಿತವು ಉತ್ತರ ತಮಿಳು ನಾಡು ಮತ್ತು ಆಂಧ್ರ ಪ್ರದೇಶದಲ್ಲಿದ್ದು, ದಕ್ಷಿಣ ಆಂಧ್ರಪ್ರದೇಶದ ಕರಾವಳಿಯಲ್ಲಿ 3.6 ಕಿ.ಮೀ. ಎತ್ತರದಲ್ಲಿದೆ. ಇಂದರಿಂದ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ನಾಲ್ಕು ದಿನ ಮಳೆಯಾಗಲಿದೆ. ಬೆಳಗಾವಿ, ಗದಗ, ಹಾವೇರಿ, ಧಾರವಾಡದಲ್ಲಿ ನವಂಬರ್ 1 ಹಾಗೂ 2 ರಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.