ಬೆಂಗಳೂರು:ಮಹಾನಗರ ಕೆಳಗಡೆ ಬಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಶಾಲೆ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರದಲ್ಲಿನ ವರುಣನ ಆರ್ಭಟ ಜೋರಾಗಿರುವುದು ಹಬ್ಬದ ತಯಾರಿಯ ಸಂಭ್ರಮಕ್ಕೆ ಬ್ರೇಕ್ ಹಾಕಿದೆ. ಸಂಜೆಯಿಂದ ಮಳೆ ಎಡಬಿಡದೇ ಸುರಿದಿದ್ದು. ನಗರದಾದ್ಯಂತ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರು ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಬಸವನಗುಡಿ, ಶೇಷಾಪುರಂ, ಜಯನಗರ, ಎಂಜಿ ರೋಡ್, ಕೆ.ಆರ್.ಮಾರುಕಟ್ಟೆ, ರಾಜಾಜಿನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಭಾಗದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಭಾರಿ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಅನುಮತಿಯ ಮೇರೆಗೆ ಇಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ಮಾಹಿತಿ ನೀಡಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಆ.30ರಿಂದ ಸೆ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.