ಬೆಂಗಳೂರು: ನಗರದಲ್ಲಿ ಸಂಜೆ ವೇಳೆಯಲ್ಲಿ ಧಾರಾಕಾರ ಮಳೆ ಆರಂಭವಾಗಿದೆ. ಗುಡುಗು ಸಹಿತ ಜೋರಾಗಿ ಮಳೆ ಬೀಳುತ್ತಿದೆ. ಜೊತೆಗೆ ಗಾಳಿಯ ಅಬ್ಬರವೂ ಹೆಚ್ಚಾಗಿದೆ. ನಗರದ ಮೆಜೆಸ್ಟಿಕ್, ಗಾಂಧಿನಗರ, ಜಯನಗರ, ಜೆಪಿ ನಗರ, ಕೋರಮಂಗಲ, ಮಲ್ಲೇಶ್ವರಂ, ಕಾರ್ಪೊರೇಷನ್ ಸರ್ಕಲ್, ಕೆ.ಆರ್. ಮಾರ್ಕೆಟ್, ರಾಜಾಜಿನಗರ, ಇಂದಿರಾನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಬೆಂಗಳೂರಲ್ಲಿ ಗುಡುಗು ಸಹಿತ ಧಾರಾಕಾರ ಗಾಳಿ ಮಳೆ - ಹವಾಮಾನ ಇಲಾಖೆ
ನಗರದ ಮೆಜೆಸ್ಟಿಕ್, ಗಾಂಧಿನಗರ, ಜಯನಗರ, ಜೆಪಿ ನಗರ, ಕೋರಮಂಗಲ, ಮಲ್ಲೇಶ್ವರಂ, ಕಾರ್ಪೊರೇಷನ್ ಸರ್ಕಲ್, ಕೆ.ಆರ್ ಮಾರ್ಕೆಟ್, ರಾಜಾಜಿನಗರ, ಇಂದಿರಾನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
rain
ಉತ್ತರ ಕೇರಳ ಕರಾವಳಿಯಿಂದ, ಗುಜರಾತ್ ಕರಾವಳಿಯವರೆಗೆ ಟ್ರಫ್ (ದಟ್ಟಮೋಡ) ನಿರ್ಮಾಣವಾಗಿರುವುದರಿಂದ ಮಳೆಯಾಗುತ್ತಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಕೆಲವು ಕಡೆ ಫೆ.21ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ ತಿಳಿಸಿದ್ದಾರೆ.
ಕಚೇರಿ ಬಿಡುವ ಸಮಯದಲ್ಲೇ ಮಳೆಯಾದ್ದರಿಂದ ವಾಹನ ಸವಾರರು ಮಳೆಯಲ್ಲಿ ಸಿಲುಕಿ ಪರದಾಡುವಂತಾಗಿದೆ.