ಬೆಂಗಳೂರು: ಮೆಜೆಸ್ಟಿಕ್, ಗಾಂಧಿನಗರ, ಮಲ್ಲೇಶ್ವರಂ, ಹಾಗೂ ಯಶವಂತಪುರದ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ರಾಜ್ಯದ ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆ - ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾತನಾಡಿ, ಇಂದು ಹಾಗೂ ನಾಳೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಲಿದೆ. ಏ. 16 , 17ರಂದು ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಏಪ್ರಿಲ್ 18ರಿಂದ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ:ದೇವರ ಗುಡಿಯಲ್ಲಿ ಶಾಸಕನ ಫೋಟೋ ಇಟ್ಟು ಪೂಜೆ: ವೈರಲ್ ಆಯ್ತು ವಿಡಿಯೋ
ಉತ್ತರ ಒಳನಾಡಿನಲ್ಲಿ ಏ. 14, 15ರಂದು ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಏ. 17, 18ರಂದು ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಏ. 14, 15ರಂದು ಹಲವು ಕಡೆ ಮಳೆಯಗಾಲಿದ್ದು, ಏ. 16ರಿಂದ 18ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಮತ್ತು ನಾಳೆಗೆ ಎಲ್ಲೋ ಅಲರ್ಟ್ ಕೊಡಲಾಗಿದೆ ಎಂದರು. ಬೆಂಗಳೂರಿನಲ್ಲೂ ಏ. 14 ಹಾಗೂ 15ರಂದು ಮಳೆಯಾಗುವ ಸಾಧ್ಯತೆಯಿದೆ ಎಂದರು.